ತುಮಕೂರು: ನಗರದ ಬಸ್ ನಿಲ್ದಾಣ ಬಳಿ ಕೆಎಸ್ ಆರ್ಟಿಸಿ ಬಸ್ ಒಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ರಸ್ತೆ ದಾಟುತ್ತಿದ್ದ ಮಹಿಳೆಗೆ ಏಕಾಏಕಿ ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾಲು ಸಂಪೂರ್ಣ ಜಜ್ಜಿ ಹೋಗಿದೆ.
ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಗೊಂಡ ಮಹಿಳೆಯನ್ನು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q