ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ವೊಂದು ರಸ್ತೆಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ನಿನ್ನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೈರನಾಯಕನಹಳ್ಳಿ ಬಳಿ ನಡೆದಿದೆ.
ಕುಣಿಗಲ್ ಟು ಮಾಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಹಳ್ಳದಲ್ಲಿ ಸಿಲುಕಿದೆ. ಹಳ್ಳದಲ್ಲಿ ಸಿಲುಕಿದ್ದ ಬಸ್ ನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.
ಕೊನೆಗೆ ಜೆಸಿಬಿ ಮೂಲಕ ಹಳ್ಳದಲ್ಲಿದ್ದ ಬಸ್ ನ್ನು ಹೊರ ತೆಗೆಯಲಾಯಿತು. ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————