ತುಮಕೂರು: ಸದ್ಯದಲ್ಲೇ ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೆ ಬೋರ್ಡ್ ಮೀಟಿಂಗ್ ಮುಗಿದಿದ್ದು 15–20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ತೈಲ ಬೆಲೆ ಏರಿಕೆ, ಹೊಸ ಬಸ್ ಗಳ ಖರಿದಿಯಿಂದ ಸಂಸ್ಥೆಗೆ ಹೊರೆಯಾಗಿದೆ. ಅಲ್ಲದೇ ಈ ಬಾರಿ ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ ಮಾಡಲಿದ್ದೇವೆ. ಈ ಎಲ್ಲಾ ಕಾರಣಗಳಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಎಸ್.ಆರ್.ಶ್ರೀನಿವಾಸ್ ಸಮರ್ಥನೆ ಕೊಟ್ಟಿದ್ದಾರೆ.
ಕಳೆದ ತ್ರೈಮಾಸಿಕದಲ್ಲಿ ನಿಗಮಕ್ಕೆ ಬರೊಬ್ಬರಿ 295 ಕೋಟಿ ರೂ ನಷ್ಟವಾಗಿದೆ. ಇವೆಲ್ಲಾ ಸರಿದೂಗಿಸಲು ಹಾಗೂ ಸಂಸ್ಥೆಯನ್ನು ಉಳಿಸಬೇಕಾದರೆ ಟಿಕೆಟ್ ದರ ಹೆಚ್ಚಿಗೆ ಮಾಡಲೇಬೇಕು ಎಂದು ಸಮಜಾಯಿಷಿ ಕೊಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA