ತುಮಕೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ.
ನಿಟ್ರಹಳ್ಳಿ ನಿವಾಸಿ ಲೋಕೇಶ್ (45) ಮೃತ ದುರ್ದೈವಿಯಾಗಿದ್ದಾರೆ. ಚಿಂತಾಮಣಿ ಯಿಂದ ಹಾವೇರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q