ಕೋಲಾರ: ಕೆ ಎಸ್ ಆರ್ ಟಿ ಸಿ ಡಿಪೋ ನೌಕರನೊಬ್ಬ ತನ್ನ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸಪುರದ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ.
ಸೋಮಾಚಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ ಶ್ರೀನಿವಾಸಪುರ ಸಾರಿಗೆ ಸಂಸ್ಥೆಯ ಬಸ್ ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಪಾರ್ಶ್ವ ವಾಯುವಿಗೆ ತುತ್ತಾಗಿದ್ದ. ಬಳಿಕ ಕಂಡಕ್ಟರ್ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಡಿಪೋದಲ್ಲಿಯೇ ಕೆಲಸಕ್ಕೆ ನಿಯೋಜನೆ ಮಾಡಿಕೊಂಡಿದ್ದರು.
ರೋಗಕ್ಕೆ ತುತ್ತಾಗಿದ್ದರೂ ಸೋಮಾಚಾರಿಯಿಂದ ಮಾಡಲು ಸಾಧ್ಯವಾಗದ ಕೆಲಸ ನೀಡುವ ಮೂಲಕ ಡಿಪೋ ಮ್ಯಾನೇಜರ್ ವೆಂಕಟೇಶ್ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೇಲಾಧಿಕಾರಿಯ ಕಿರುಕುಳದ ಬಗ್ಗೆ ತನ್ನ ಬಳಿ ಹೇಳಿಕೊಂಡಿದ್ದರು ಎಂದು ಮೃತ ಕಂಡಕ್ಟರ್ ಪತ್ನಿ ಧನಲಕ್ಷ್ಮೀ ಹೇಳಿದ್ದಾರೆ.
ಈ ಸಂಬಂಧ ಶ್ರೀನಿವಾಸಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


