ಸರ್ಕಾರದ ಮಹತ್ವಕಾಂಕ್ಷಿ ‘ಶಕ್ತಿ’ ಯೋಜನೆಯನ್ನು ವ್ಯವಸ್ಥಿತವಾಗಿ ನಡೆಯುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಸುಕುಮಾರ್ ಅವರು 16 ವಿಭಾಗೀಯ ನಿಯಂತ್ರಣಾಧಿಕಾರಿಗಳು, 83 ಘಟಕ ವ್ಯವಸ್ಥಾಪಕರೊಂದಿಗೆ ಮಂಗಳವಾರ ವೀಡಿಯೊ ಸಂವಾದದಲ್ಲಿ ಸೂಚನೆ ನೀಡಿದರು.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿರ್ದೇಶನದಂತೆ ‘ಜನಸಂದಣಿ ಹೆಚ್ಚಿರುವ 10 ಸ್ಥಳಗಳು, ಜಾತ್ರೆ, ಹಬ್ಬಗಳಿರುವ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ ಮಾಡಬೇಕು. ಗುರುತಿಸಿರುವ ಸ್ಥಳಗಳಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದರು.
ಬಸ್ ಗಳ ನಿಯೋಜನೆ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಗೊಂದಲಕ್ಕೆ ಅವಕಾಶ ನೀಡಬಾರದು. ನಿಗಮದ ಚಾಲನಾ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ, ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಕೇಂದ್ರ ಕಚೇರಿ ಹಿರಿಯ ಅಧಿಕಾರಿಗಳು, ಉಸ್ತುವಾರಿ ಅಧಿಕಾರಿಗಳು ಪ್ರತಿವಾರ ತಪ್ಪದೇ ವಿಭಾಗಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಬೇಕು.
ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹೆಚ್ಚುವರಿ ಟ್ರಿಪ್ ಗಳ ವ್ಯವಸ್ಥೆ ಮಾಡಬೇಕು’ ಎಂದು ಸಂವಾದದಲ್ಲಿ ಸೂಚಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


