ಬೆಂಗಳೂರಿನ ಹೆಬ್ಬಾಗಿಲು ಮೆಜೆಸ್ಟಿಕ್ ನಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮಂಗಳವಾರ ಸಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಟರ್ಮಿನಲ್ ಪವರ್ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕೂಡಲೇ ಘಟನಾ ಸ್ಥಳದಿಂದ ಪ್ರಯಾಣಿಕರು ಹಾಗೂ ಅಂಗಡಿ ಮಾಲೀಕರನ್ನು ದೂರ ಕಳುಹಿಸಿ ಸಮಯಪ್ರಜ್ಞೆ ತೋರಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy