nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯುವ ನೀರಿಗೂ ಕಷ್ಟದ ದಿನಗಳು ಬರಲಿವೆ : ದೇವೇಗೌಡರ ಎಚ್ಚರಿಕೆ
    ರಾಜ್ಯ ಸುದ್ದಿ May 12, 2022

    ಕುಡಿಯುವ ನೀರಿಗೂ ಕಷ್ಟದ ದಿನಗಳು ಬರಲಿವೆ : ದೇವೇಗೌಡರ ಎಚ್ಚರಿಕೆ

    By adminMay 12, 2022No Comments2 Mins Read
    devegowda

    ಬೆಂಗಳೂರಿಗೆ ಕುಡಿಯುವ ನೀರಿನ ವಿಚಾರದಲ್ಲಿ ಇನ್ನಷ್ಟು ಕಷ್ಟದ ದಿನಗಳು ಬರಲಿವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.ಬಸವನಗುಡಿ ವಿಧಾನಸಭಾ ಕ್ಷೇತ್ರದ ಗವಿಗಂಗಾಧರೇಶ್ವರ ದೇವಾಲಯದ ಬಳಿ ಹಮ್ಮಿಕೊಂಡಿದ್ದ ಜೆಡಿಎಸ್ನ ಜನತಾ ಜಲಧಾರೆ ಸಂಕಲ್ಪ ಸಮಾವೇಶ ಮತ್ತು ಗಂಗಾರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದ ಕೆಲವು ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಬೆಂಗಳೂರಿನ ಜನರ ಕುಡಿಯುವ ನೀರಿನ ಬವಣೆ ಪರಿಹರಿಸಬೇಕಾಗಿದೆ ಎಂದರು.

    1994ರಲ್ಲಿ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರವನ್ನು ಆರಂಭಿಸಲಾಗಿತ್ತು. ಆಗ ಪಕ್ಷ ಅಕಾರಕ್ಕೆ ಬಂದಿತ್ತು. ಇಂದು ಕೂಡ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದೇವೆ. ಶಿವನ ಕೃಪೆ ನಮ್ಮ ಮೇಲೆ ಇರಲಿ. ಇದು ಶ್ರೇಷ್ಟವಾದ ಸ್ಥಳ ಎಂದರು.

    ಮೇ 13ರಂದು ನೆಲಮಂಗಲದ ಬಳಿ ನಡೆಯುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಹಾಹಕಾರ ಬರುವ ದಿನಗಳು ದೂರವಿಲ್ಲ. ಕಳೆದ 75 ವರ್ಷದಲ್ಲಿ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವುದು ನಮ್ಮ ಜನತಾ ಜಲಧಾರೆಯ ಉದ್ದೇಶವಾಗಿದೆ.

    ನಗರದ ಹಲವು ಭಾಗಗಳಲ್ಲಿ ಟ್ಯಾಂಕರ್ ಮತ್ತು ಬೋರ್ವೆಲ್ ಮೂಲಕ ನೀರು ಪೂರೈಸಲಾಗುತ್ತಿದೆ. ಈಗಲೂ ದೊಡ್ಡ ಮಟ್ಟದ ಕುಡಿಯುವ ನೀರಿನ ಸಮಸ್ಯೆಯನ್ನು ಬೆಂಗಳೂರು ಎದುರಿಸುತ್ತಿದೆ ಎಂದರು.ತಮಿಳುನಾಡಿನ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ 9 ಟಿಎಂಸಿ ನೀರನ್ನು ಬಳಕೆಗೆ ಒಪ್ಪಿಗೆ ಕೊಟ್ಟಿರಲಿಲ್ಲ. ದೇವೇಗೌಡರು ಪ್ರಧಾನಿಯಾದ ನಂತರ 9 ಟಿಎಂಸಿ ನೀರು ಬೆಂಗಳೂರಿಗೆ ದೊರೆಯುವಂತಾಯಿತು.

    ಜನತಾದಳ ಸರ್ಕಾರವಿದ್ದಾಗ ಬೆಂಗಳೂರು ಅಭಿವೃದ್ಧಿಗೆ ಗುಣಾತ್ಮಕ ಕೆಲಸವಾಗಿತ್ತು. ಈಗ ಜನಪ್ರತಿನಿಗಳ ಅಭಿವೃದ್ಧಿಯಾಗುತ್ತಿದೆ. ಜನರ ಸಂಪತ್ತು ಲೂಟಿಯಾಗುತ್ತಿದೆ. ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ವಾಜಪಾಯಿ ಕ್ರೀಡಾಂಗಣದ ಛಾವಣಿ ಕುಸಿದು ಬಿದ್ದಿದೆ. ಇದು ಈಗಿನ ಶಾಸಕರು ಕೊಡುತ್ತಿರುವ ಕೊಡುಗೆ ಎಂದು ವ್ಯಂಗ್ಯವಾಡಿದರು.

    ಧರ್ಮದ ಆಚರಣೆಯನ್ನು ಮನೆಯಲ್ಲಿ ಮಾಡಿ ರಸ್ತೆಯಲ್ಲಿ ಅಶಾಂತಿ ಸೃಷ್ಟಿ ಉಂಟು ಮಾಡುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, 2023ಕ್ಕೆ ಶೇ.100ರಷ್ಟು ಜೆಡಿಎಸ್ ಅಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂ ಅವರ ಸಿನಿಮಾ ನೋಡಿದ್ದಾಗಿದೆ. ಬಿಜೆಪಿಯವರ ಗಂಗಾಪೂಜೆ ನಾಟಕ, ನಲ್ಲಿ ನೀರು ತಂದು ಗಂಗಾಜಲ ಎಂದರು. ನಾನು 19 ನದಿಗಳ ಶುದ್ದ ಗಂಗಾಜಲವನ್ನು ತಂದು ಪೂಜಿಸುತ್ತಿದ್ದೇವೆ ಎಂದರು.

    ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಮಾತನಾಡಿ, 1994ರಲ್ಲಿ ಗವಿಗಂಗಾಧರೇಶ್ವರ ದೇವಾಲಯದಿಂದ ಜನತಾ ವಾಹಿನಿ ಪ್ರಾರಂಭ ಮಾಡಲಾಗಿತ್ತು. ಆಗ 118 ಕ್ಷೇತ್ರಗಳಲ್ಲಿ ಜಯಗಳಿಸಿ ಅಕಾರಕ್ಕೆ ಬರಲಾಗಿತ್ತು. ಈಗಲೂ ಇಲ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನು ಮಾಡಿದ್ದು, ಮುಂದೆ ಅಕಾರಕ್ಕೆ ಬರುವುದು ನಿಶ್ಚಿತ. ಈ ದೇವಾಲಯ ದಕ್ಷಿಣ ಕಾಶಿ. ಇಲ್ಲಿ ಗಂಗಾಪೂಜೆ ನೆರವೇರಿಸಿದ್ದೇವೆ ಎಂದರು.

    ಏ.16ರಂದು ಕೆಆರ್ಎಸ್ನಲ್ಲಿ ಕಾವೇರಿ ನದಿಗೆ ಪೂಜೆ ಸಲ್ಲಿಸಿ ಜನತಾ ಜಲಧಾರೆ ಆರಂಭಿಸಲಾಗಿತ್ತು. ಆಗಿನಿಂದಲೂ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತವಾಗಿದೆ.ಬಸವನಗುಡಿ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸುತ್ತಿದ್ದು, ಯಾರೇ ಅಭ್ಯರ್ಥಿಯಾದರೂ ಬೆಂಬಲಿಸಬೇಕು, ಬಿಬಿಎಂಪಿ ಚುನಾವಣೆಯಲ್ಲಿ 4 ವಾರ್ಡ್ಗಳಲ್ಲಾದರೂ ಜಯಗಳಿಸಲು ಶ್ರಮಿಸಬೇಕೆಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್. ಪ್ರಕಾಶ್, ಪಕ್ಷದ ಮುಖಂಡರಾದ ಭಾಗೇಗೌಡ, ತಿಮ್ಮೇಗೌಡ, ರುತ್ ಮನೋರಮಾ, ಲತಾ ಸುಕುಮಾರ್, ಆದಿಶೇಷಯ್ಯ, ಪ್ರಸಾದ್ ಮತ್ತಿತರರು ಇದ್ದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾರ್ವಜನಿಕರು ಮೃತಪಟ್ಟ ಘಟನೆಯನ್ನು ಕೇಂದ್ರ…

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.