ತುಮಕೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಸ್ಕ್ರೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕೆಂಬಳಲು ಗ್ರಾಮದಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿದ್ದ ಪತಿ ನಾಗರಾಜು ಎಂಬಾತ ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿ ನಂತರ ಮೃತಾದೇಹವನ್ನು ಬಾತ್ರೂಮ್ ಪಿಟ್ ಗುಂಡಿಯಲ್ಲಿ ಎಸೆದಿದ್ದಾನೆ ಎನ್ನಲಾಗಿದೆ.
ಜಯಮ್ಮ (52) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಬುಧವಾರ ರಾತ್ರಿ ಪ್ರಕರಣ ಬಯಲಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪತಿ ನಾಗರಾಜುನನ್ನು ವಶಕ್ಕೆ ಪಡೆದಿದ್ದಾರೆ.
ಮೃತಪಟ್ಟ ಮಹಿಳೆಯ ಮೃತ ದೇಹವನ್ನು ಫಿಟ್ ಗುಂಡಿಯಿಂದ ಹೊರತೆಗೆಯಲಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
ವರದಿ: ಮಾರುತಿ ಪ್ರಸಾದ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB