ಗುಬ್ಬಿ: ತಾಲ್ಲೂಕಿನ ಸುಮಾರು 30ಕ್ಕೂ ಅಧಿಕ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿದ್ದು, ಪರಿಣಾಮವಾಗಿ ಇಲ್ಲಿನ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎನ್ನವ ಆಕ್ರೋಶಗಳು ಇದೀಗ ಕೇಳಿ ಬಂದಿದೆ.
ತಾಲ್ಲೂಕಿನಲ್ಲಿ ಸುಮಾರು 138 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ ತಾಲೂಕಿನಾದ್ಯಂತ 30ಕ್ಕೂ ಅಧಿಕ ಘಟಕಗಳಲ್ಲಿ ಸರಿಯಾದ ನಿರ್ವಹಣೆಯಾಗದೇ ಕೆಟ್ಟು ಹೋಗಿದ್ದು, ಇದರ ದುರಸ್ತಿ ಮಾಡಬೇಕಾದ ಏಜೆನ್ಸಿಗಳು ಸುಮ್ಮನೆ ಕುಳಿತಿವೆ. ಇನ್ನೊಂದೆಡೆ ಪಂಚಾಯತ್ ಅಧಿಕಾರಿಗಳು ಕೂಡ ಇದನ್ನು ಪ್ರಶ್ನಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನೂ ನೀರಿನ ಘಟಕಗಳನ್ನು ಸರಿಪಡಿಸುವಂತೆ ಅಧಿಕಾರಿಗಳು ಏಜೆನ್ಸಿಗಳಿಗೆ ಹೇಳಿದರೂ ಅವರು ಸ್ಪಂದಿಸುತ್ತಿಲ್ಲ ಎನ್ನವ ಆರೋಪ ಕೂಡ ಕೇಳಿ ಬಂದಿದೆ. ಈ ಬಗ್ಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸೇರಿದಂತೆ ಹಲವೆಡೆಗಳಲ್ಲಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ.
ಈ ವಿಚಾರ ಹಲವಾರು ಬಾರಿ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿ ಚರ್ಚೆಯಾಗಿದೆ. ಆದರೆ, ಏಜೆನ್ಸಿಯವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಲಾಗಿದ್ದರೂ, ಈವರೆಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700