ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)ಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರೀಕ್ ಈಗಾಗಲೇ ಪೊಲೀಸರ ವಶದಲ್ಲಿದ್ದು, ತನಿಖೆಯಲ್ಲಿ ದೇವಸ್ಥಾನ, ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆಸುವುದು ಸೇರಿದಂತೆ ಹಲವಾರು ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತನಿಖೆಯನ್ನು ಎನ್ ಐಗೆ ಹಸ್ತಾಂತರಿಸಿದೆ.
ಒಂದು ವೇಳೆ ಆಟೋದಲ್ಲಿ ಕುಕ್ಕರ್ ಬ್ಲಾಸ್ಟ್ ಆಗದೇ ಇದ್ದಿದ್ರೆ ಮಂಗಳೂರಿನ ಪ್ರಸಿದ್ಧ ದೇಗುಲಗಳು, ಬಸ್ ನಿಲ್ದಾಣ ಹಾಗೂ ಆರ್ಎಸ್ಎಸ್ ಕಚೇರಿ ಶಾರೀಕ್ನ ಟಾರ್ಗೆಟ್ ಆಗಿತ್ತು ಎನ್ನುವ ಆಘಾತಕಾರಿ ಅಂಶಗಳು ಪೊಲೀಸ್ ತನಿಖೆ ವೇಳೆ ಹೊರಬಂದಿವೆ.
ಉಗ್ರ ಶಾರೀಕ್ ವಿರುದ್ಧ UAPA ಕಾಯ್ದೆ ಅನ್ವಯ ಕೇಸ್ ದಾಖಲು ಮಾಡಲಾಗಿದ್ದು, ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ NIAಗೆ ಕೇಸ್ ವರ್ಗಾವಣೆ ಮಾಡಲಾಗಿದ್ದು, ಇಂದು NIA ಅಧಿಕಾರಿಗಳು ಶಾರೀಕ್ ನ ತೀವ್ರ ವಿಚಾರಣೆ ಒಳಪಡಿಸಿದ್ದಾರೆ.
ಮಂಗಳೂರಿನಲ್ಲಿ ಎನ್ ಐಎ ಘಟಕ ಸ್ಥಾಪನೆ?
ಕಂಕನಾಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯ ಹೊಣೆಯನ್ನು ಈಗಾಗಲೇ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿದ್ದು, ಘಟನೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಮಂಗಳೂರಿನ ನಾಗುರಿಗೆ ಶುಕ್ರವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರ್ಕಾರವು ಪ್ರಯತ್ನಿಸುತ್ತಿದೆ. ಉಗ್ರರ ಸಂಚುಗಳನ್ನು ವಿಫಲಗೊಳಿಸಲಾಗುತ್ತಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡುವ ಅವರ ಪ್ರಯತ್ನ ವಿಫಲವಾಗಿದೆ ತನಿಖೆ ದೃಷ್ಟಿಯಿಂದ ಗೃಹಸಚಿವರು ಮೊದಲು ಭೇಟಿ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಮಂಗಳೂರಿನಲ್ಲಿ ಇಂದಲ್ಲ ನಾಳೆ NIA ಘಟಕ ಸ್ಥಾಪಿಸಲಾಗುವುದು. ಕೇಂದ್ರ ಸರ್ಕಾರವೂ ಈ ಬಗ್ಗೆ ಸಕಾರಾತ್ಮಕವಾಗಿ ಪರಿಶೀಲನೆ ನಡೆಸುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಇಂಥ ವಾತಾವರಣ ಸೃಷ್ಟಿಯಾಗಬಾರದು ಬಾಂಬ್ ಸ್ಪೋಟದ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದನೆಯ ಆತಂಕವನ್ನು ಸರ್ಕಾರವು ಸದೃಢವಾಗಿ ಎದುರಿಸುತ್ತಿದೆ. ಭಯೋತ್ಪಾದಕರ ಬಗ್ಗೆ ನಮ್ಮ ಸರ್ಕಾರವು ಎಂದಿಗೂ ಮೃದು ಧೋರಣೆ ತಳೆದಿಲ್ಲ ಎಂದು ಅವರು ವಿವರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


