ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಸೋಮಣ್ಣ ಪರವಾಗಿ ಇಂದು, ಜಿಲ್ಲೆಯ ವಿವಿಧಡೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ನಡೆಸಲಾಯಿತು.
ತಿಪಟೂರಿನ ನೋಣವಿನಕೆರೆಯಲ್ಲಿ ನಡೆದ ಬಹಿರಂಗ ಪ್ರಚಾರದ ವೇಳೆ ಜೆಡಿಎಸ್ ಪಕ್ಷದ ಎರಡು ಬಣಗಳ ನಡುವೆ ಗಲಾಟೆ ನಡೆದಿದ್ದು, ಸ್ಥಳೀಯ ಜೆಡಿಎಸ್ ಮುಖಂಡ ರಾಕೇಶ್ ಗೌಡ ಹಾಗೂ ಶಾಂತಕುಮಾರ್ ಬೆಂಬಲಿಗರಿಂದ ಗಲಾಟೆ ನಡೆಯಿತು. ರಾಕೇಶ್ ಗೌಡ ನೇತೃತ್ವದಲ್ಲಿ ಪ್ರಚಾರ ರ್ಯಾಲಿ ನಡೆಸುವಂತೆ ಒತ್ತಾಯಿಸಿ ಗಲಾಟೆ ನಡೆಯಿತು. ಇದರಿಂದ ಬಹಿರಂಗ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಗೊಂದಲಕ್ಕೆ ಒಳಗಾದರು.
ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಕೊನೆಗೆ ಖುದ್ದು ಪ್ರಚಾರ ವಾಹನದಿಂದ ಕೆಳಗಿಳಿದು ಹೋಗಿ ಕಾರ್ಯಕರ್ತರನ್ನ ಸೋಮಣ್ಣ ಸಮಾಧಾನ ಪಡಿಸಿದರು.
ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ನೊಣವಿನಕೆರೆ ತಿಪಟೂರು ಗುಬ್ಬಿ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ದಿನವಿಡೀ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296