ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನ ತಿಪ್ಪೂರು ಬಳಿ ನಡೆದಿದೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ ಮಂಗಳೂರಿಗೆ ತೆರಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಹೆಚ್.ಡಿ.ಕೆ. ಅವರ ಬೆಂಗಾವಲು ವಾಹನ ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಎಸ್ಕಾರ್ಟ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೊಲೀಸ್ ಸಿಬ್ಬಂದಿ ಮಹೇಶ್, ಆನಂದ್, ಹರೀಶ್ ಎಂಬುವವರು ಗಾಯಗೊಂಡಿದ್ದು, ಗಾಯಾಳು ಸಿಬ್ಬಂದಿಗಳನ್ನು ಆದಿಚುಂಚನಗಿರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy