ಬೆಂಗಳೂರು: ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿಚಾರ ಗೊತ್ತಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂಬ ಹೆಚ್.ಡಿ.ಕೆ. ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು.
ನಾನು ನಿನ್ನೆ ಊರಿನಲ್ಲೇ ಇರಲಿಲ್ಲ. ಸಾತನೂರು, ಕನಕಪುರದಲ್ಲಿ ಕ್ಷೇತ್ರದ ಕೆಲಸ ಸಂಬಂಧ ಪ್ರವಾಸ ಕೈಗೊಂಡಿದ್ದೆ. ಕುಮಾರಸ್ವಾಮಿ ಅವರು ಕೆಪಿಸಿಸಿ ನೆನೆಸಿಕೊಂಡರೆ ನಾನು ಏನು ತಾನೇ ಮಾತನಾಡಲು ಸಾಧ್ಯ? ಎಂದರು.
ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ. ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ, ನನಗೆ ಅವರು ಸಿಕ್ಕಿಯೂ ಇಲ್ಲ ಗೊತ್ತೂ ಇಲ್ಲ ಎಂದು ಡಿಕೆಶಿ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296