ಮೈಸೂರು: ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ. ಅದಕ್ಕಾಗಿ ಅಧಿಕಾರಿಗಳ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಕುಮಾರಸ್ವಾಮಿ ಮತ್ತು ಎಡಿಜಿಪಿ ನಡುವೆ ನಡೆಯುತ್ತಿರುವ ವಾದ–ಪ್ರತಿವಾದಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಉತ್ತರಿಸಿದರು.
ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಕುಮಾರಸ್ವಾಮಿಯವರನ್ನು ನೇರವಾಗಿ ಟೀಕಿಸಿಲ್ಲ, ಬರ್ನಾಡ್ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಎಂದು ಸಿಎಂ ಹೇಳಿದರು.
ಕುಮಾರಸ್ವಾಮಿ ಮತ್ತು ಎಡಿಜಿಪಿ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅದಕ್ಕೆ ಚಂದ್ರಶೇಖರ್ ಉತ್ತರ ನೀಡಿದ್ದಾರೆ. ನನಗೆ ಅಷ್ಟೇ ಗೊತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾನೂನು ಬಾಹಿರವಾಗಿ ನಡೆದುಕೊಂಡಾಗ ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದು ಕಂಡುಬರುತ್ತದೆ. ಕುಮಾರಸ್ವಾಮಿಯವರನ್ನು ಹಂದಿ ಎಂದು ಚಂದ್ರಶೇಖರ್ ಅವರು ಹೇಳಿಲ್ಲ. ಬರ್ನಾಡ್ ಶಾ ಹೇಳಿದ್ದನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q