ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಟೀಕಿಸಿದ ಕುಮಾರಸ್ವಾಮಿ, ಸಂಸತ್ ಭವನ ಒಂದು ಪಕ್ಷಕ್ಕೆ, ವ್ಯಕ್ತಿಗೆ ಸೀಮಿತವಲ್ಲ. ದೇಶದ ತೆರಿಗೆ ಹಣದಿಂದ ಕಟ್ಟಿರುವ ಭವನ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಧ್ವನಿ ಎತ್ತಿದ್ದಾರೆ.
ರಾಷ್ಟ್ರಪತಿಯಾಗಿರುವ ಆದಿವಾಸಿ ಮಹಿಳೆಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಧ್ವನಿ ಎತ್ತಿದೆ. ಯಾವುದೇ ಭವನವನ್ನು ಉದ್ಘಾಟನೆ ಮಾಡಬೇಕಾದಾಗ ರಾಷ್ಟ್ರಪತಿ, ರಾಜ್ಯಪಾಲರನ್ನು ಕರೆದ ಉದಾಹರಣೆ ಇಲ್ಲ. ಛತ್ತೀಸ್ಗಢ ವಿಧಾನಸಭೆ ಅಡಿಗಲ್ಲಿಗೆ ಸೋನಿಯಾಗಾಂಧಿ, ರಾಹುಲ್ ಗಾಂಧಿಯನ್ನು ಕರೆದಿದ್ದರೂ. ರಾಜ್ಯಪಾಲರನ್ನು ಕರೆಸಿ ಅಡಿಗಲ್ಲು ಹಾಕಿಸಿರಲಿಲ್ಲ. ಕರ್ನಾಟಕದ ವಿಕಾಸಸೌಧವನ್ನು ಅಂದಿನ ಮುಖ್ಯಮಂತ್ರಿ ಉದ್ಘಾಟನೆ ಮಾಡಿದ್ದರು. ಕಾಂಗ್ರೆಸ್ ಪಕ್ಷ ಈಗ ರಾಷ್ಟ್ರಪತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h


