ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರಿಗೆ ನವದೆಹಲಿಯ ಅವರ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭಾವಪೂರ್ಣ ಅಂತಿಮ ನಮನ ಸಲ್ಲಿಸಿದರು.
ವಿತ್ತ ಮಂತ್ರಿ, ಪ್ರಧಾನಮಂತ್ರಿ ಸೇರಿ ಅನೇಕ ಉನ್ನತ ಸ್ಥಾನಗಳನ್ನು ಅಲಂಕರಿಸಿ ಸರಳತೆ, ಸೌಮ್ಯತೆ, ಪ್ರಾಮಾಣಿಕತೆ ಮೂಲಕ ಅನೇಕ ಸಾಧನೆಗಳ ಅಚ್ಚಳಿಯದ ಛಾಪು ಮೂಡಿಸಿ ರಾಷ್ಟ್ರಕ್ಕೆ ಎಣೆ ಇಲ್ಲದ ಕೊಡುಗೆ ನೀಡಿದ ಅವರು ಚಿರಸ್ಮರಣೀಯರು ಎಂದು ಕುಮಾರಸ್ವಾಮಿ ತಿಳಿಸಿದರು.
ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿದ ಅವರು ಕುಟುಂಬಕ್ಕೆ ಸಾಂತ್ವನ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx