ಕುಣಿಗಲ್: ಬೈಕ್ ಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ ಸಿದ್ದಾಪುರ ಗೇಟ್ ಬಳಿ ಸಂಭವಿಸಿದೆ.
ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಳೆವೂರು ಗ್ರಾಮದ ಶಿವಶಂಕರ್ (63), ಪತ್ನಿ ಸುನಂದಾ (52) ಮೃತಪಟ್ಟವರು.
ದಂಪತಿ ಬೈಕ್ ನಲ್ಲಿ ಎಡೆಯೂರಿಗೆ ಬಂದು ಹಿಂತಿರುಗುವಾಗ ಹಾಸನ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


