nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    ಕುಣಿಗಲ್ July 29, 2026

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    By Ganesh TumkuruJuly 29, 2026No Comments2 Mins Read
    kunigal

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾದ ಕೋಟೆ ತಿಮ್ಮಣ್ಣ ಅವರು ಪಟ್ಟಣದ ನಾಗರಿಕರಿಗೆ ಪ್ರಕಟಿಸಿದ್ದಾರೆ. ಪಟ್ಟಣದ ಗ್ರಾಮ ದೇವತಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೋಟೆ ತಿಮ್ಮಣ್ಣ ಅವರ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಲೆಕ್ಕಪತ್ರವನ್ನು ಮಂಡಿಸಿ, ಸಾರ್ವಜನಿಕರ ಮಾಹಿತಿಗಾಗಿ ಬಹಿರಂಗಪಡಿಸಲಾಯಿತು.

    2026ನೇ ಸಾಲಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ದೇಣಿಗೆ ರೂಪದಲ್ಲಿ ನೀಡಿರುವ ಹಣ ಮತ್ತು ದೇವಾಲಯದ ಹುಂಡಿಯಿಂದ ಒಟ್ಟು 7,30,932 ರೂಪಾಯಿ ಸಂಗ್ರಹವಾಗಿತ್ತು. ಈ ಪೈಕಿ ಜಾತ್ರಾ ಮಹೋತ್ಸವದ ಒಟ್ಟು ವೆಚ್ಚಕ್ಕಾಗಿ 6,12,000 ರೂಪಾಯಿಗಳನ್ನು ಖರ್ಚು ಮಾಡಲಾಗಿದ್ದು, ಉಳಿದಂತೆ 1,18,932 ರೂಪಾಯಿಗಳಷ್ಟು ಹಣ ಉಳಿತಾಯವಾಗಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು.

    ಜಾತ್ರಾ ಮಹೋತ್ಸವವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಯಾವುದೇ ರೀತಿಯ ಲೋಪ ಅಥವಾ ತೊಂದರೆಯಾಗದಂತೆ ನಿರ್ವಹಿಸಲಾಗಿದೆ. ಆಗಮಿಸಿದ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ದೇವಿಯ ದರ್ಶನ ಪಡೆದ ಭಕ್ತಾದಿಗಳಿಗೆ ಒಟ್ಟು 12 ಸಾವಿರ ಸಿಹಿ ಲಡ್ಡುಗಳನ್ನು ವಿತರಿಸಲಾಯಿತು. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಪಟ್ಟಣದ ಸಮಸ್ತ ನಾಗರಿಕರು, ವರ್ತಕರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮತ್ತು ಭಕ್ತಾದಿಗಳಿಗೆ ಟ್ರಸ್ಟ್ ಅಧ್ಯಕ್ಷರಾದ ಕೋಟೆ ತಿಮ್ಮಣ್ಣ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

    ಈ ಸರ್ವ ಸದಸ್ಯರ ಸಭೆಯಲ್ಲಿ ಟ್ರಸ್ಟಿನ ಕಾರ್ಯದರ್ಶಿ ವಕೀಲ ಅನಂತ ರಾಮು, ಖಜಾಂಚಿ ವೆಂಕಟೇಶ್, ಕೋಟೆ ಮಹೇಶ್, ಮಾಜಿ ಪುರಸಭಾ ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಬೋರಲಿಂಗನಪಾಳ್ಯ ವೆಂಕಟೇಶ್, ಮೂರ್ತಪ್ಪ ಚಾರ್, ಉಷಾ, ರವೀಂದ್ರ ಕುಮಾರ್, ರಾಮಚಂದ್ರಯ್ಯ, ಬಿ.ಕೆ. ವೆಂಕಟೇಶ್, ಎಸ್.ವಿ.ಬಿ. ಸುರೇಶ್, ಸಾಮಿಲ್ ಲೋಕೇಶ್, ದ್ವಾರಕನಾಥ್, ರವೀಂದ್ರನಾಥ್, ನಾಗೇಶ್ ಶೆಟ್ಟಿ ಸೇರಿದಂತೆ ಪಟ್ಟಣದ ವಿವಿಧ ಸಮುದಾಯಗಳ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.