ತುಮಕೂರು: ಕುಣಿಗಲ್ ನಗರದ ಸಿವಿಲ್ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸೆಪ್ಟೆಂಬರ್ 27ರಂದು ನಡೆಯಲಿದೆ.
ಹೀಗಾಗಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಾದು ಹೋಗುವ ಪ್ರಮುಖ ಸ್ಥಳಗಳಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕುಣಿಗಲ್ ನಗರದ 5 ಕಿ.ಮೀ. ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 27ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಒಣ ದಿನವೆಂದು ಘೋಷಿಸಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಈ ಆದೇಶದನ್ವಯ ಡಿಸ್ಟಿಲರಿ ಹೊರತುಪಡಿಸಿ ಎಲ್ಲಾ ತರಹದ ಮದ್ಯ ಮಾರಾಟ, ಸಾಗಾಣಿಕೆಯನ್ನು ನಿಷೇಧಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q