nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    ಕುಣಿಗಲ್ November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    By adminNovember 7, 2025No Comments1 Min Read
    jds

    ಕುಣಿಗಲ್: ತಾಲ್ಲೂಕಿನಲ್ಲಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದು, ಅಧಿಕಾರಿಗಳು ಶಾಸಕರ ಮರ್ಜಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಾಲ್ಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಎನ್‌.ಜಗದೀಶ್ ಆರೋಪಿಸಿದರು.

    ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಮಲ್ಲಾಘಟ್ಟದಲ್ಲಿ 9 ಎಕರೆ ಜಮೀನನ್ನು ಆಶ್ರಯ ನಿವೇಶನಗಳ ಹಂಚಿಕೆಗೆ ಮೀಸಲಿಟ್ಟು 20 ವರ್ಷ ಕಳೆದಿವೆ. ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಸಾವಿರ ಆಶ್ರಯ ನಿವೇಶನ ಆಕಾಂಕ್ಷಿಗಳು ಹತ್ತು ಹಲವು ಬಾರಿ ಅರ್ಜಿಗಳನ್ನು ಸಲ್ಲಿಸಿ ಹತ್ತಾರು ವರ್ಷದಿಂದ ಕಾಯುತ್ತಿದ್ದಾರೆ. ಆದರೆ ಶಾಸಕ ರಂಗನಾಥ್ ಆರು ಮಂದಿ ಅನರ್ಹರಿಗೆ ಯಾವುದೇ ಮಾನದಂಡಗಳನ್ನು ಪರಿಪಾಲಿಸದೆ ಮಂಜೂರು ಮಾಡಿದ್ದಾರೆ.


    Provided by
    Provided by

    ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಶಾಸಕರ ಬಲವಂತಕ್ಕೆ ಮಾಡಲಾಗಿದೆ ತಮ್ಮದೇನು ಪಾತ್ರವಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

    ಈ ಹಿಂದೆ ಈ 6 ಮಂದಿ ಆಶ್ರಯ ನಿವೇಶನಗಳಿಗೆ ಮೀಸಲಿಟ್ಟ ಜಾಗದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಂಗಣ್ಣಗೌಡ ಸೂಚನೆ ಮೇರೆಗೆ ಮನೆಗಳನ್ನು ನಿರ್ಮಿಸುತ್ತಿದ್ದು, ತಡೆದ ಸಮಯದಲ್ಲಿ ಅಧಿಕಾರಿಗಳು ನಿರುತ್ತರರಾಗಿದ್ದರು. ಆಶ್ರಯ ನಿವೇಶನ ಹಂಚಿಕೆಗೆ ಇರುವ ಮಾನದಂಡಗಳನ್ನು ಅನುಸರಿಸದೆ 6 ಮಂದಿಗೆ ಹಂಚಿಕೆ ಮಾಡಿರುವುದು ಖಂಡನೀಯ ಎಂದರು.

    ತಾಲ್ಲೂಕಿನ ಹುಲಿವಾನ ಗ್ರಾಮದಲ್ಲಿ 150 ವರ್ಷಗಳಿಂದಲೂ ಗ್ರಾಮಸ್ಥರು ಸ್ಮಶಾನಕ್ಕೆ ಬಳಕೆ ಮಾಡುತ್ತಿದ್ದ ಎರಡು ಎಕರೆ ಜಮೀನನ್ನು ಸರ್ಕಾರ ಸ್ಮಶಾನಕ್ಕಾಗಿ ಮಂಜೂರು ಮಾಡಿದ್ದರೂ, ಈ ಜಾಗಕ್ಕೆ ಹೊಂದಿಕೊಂಡಂತೆ ಕಾಂಗ್ರೆಸ್ ಮುಖಂಡರೊಬ್ಬರು ಮನೆ ನಿರ್ಮಿಸಿಕೊಂಡಿದ್ದಾರೆ.

    ಶಾಸಕರು ಪ್ರಭಾವ ಬೀರಿ ಚಕ್ಕುಬಂದಿಯನ್ನೇ ಬದಲಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ, ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ ಪರಿಣಾಮ ಸ್ಮಶಾನ ಜಾಗದ ಬಗ್ಗೆ ಅಧಿಕಾರಿಗಳಿಂದ ಸ್ಪಷ್ಟ ಆದೇಶ ಬಂದಿದ್ದರೂ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳು ಶಾಸಕರ ಸೂಚನೆಯಂತೆ ಕಾರ್ಯನಿರ್ವಹಿಸಿ ಸ್ಮಶಾನದ ಜಾಗಕ್ಕೂ ವಿವಾದ ಸೃಷ್ಟಿಸುತ್ತಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ತರಿಕೆರೆ ಪ್ರಕಾಶ್, ಕೆ.ಎಲ್.ಹರೀಶ್, ರಂಗಸ್ವಾಮಿ, ಜಗದೀಶ್‌, ಎಡೆಯೂರು ದೀಪೂ, ಮನೋಜ್ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”

    December 27, 2025

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.