nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    ಕುಣಿಗಲ್ April 2, 2026

    ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ

    By adminApril 2, 2026No Comments2 Mins Read
    kunigal

    ಕುಣಿಗಲ್: ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಜಯಂತಿಗಳನ್ನು ಒಟ್ಟಿಗೆ ಆಚರಿಸುವ ಸಂಬಂಧ ಬಲ ಹಾಗೂ ಎಡಗೈ ಸಮುದಾಯಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು ಒಮ್ಮತಕ್ಕೆ ಬಾರದ ಕಾರಣ ಈ ಬಾರಿ ಇಬ್ಬರು ಮಹಾನ್ ನಾಯಕರ ಜಯಂತಿ ಕಾರ್ಯಕ್ರಮವನ್ನು ಪ್ರತ್ಯೇಕವಾಗಿ ಆಚರಣೆ ಮಾಡಲು ತೀರ್ಮಾನ ಕೈಗೊಂಡ ಪ್ರಸಂಗ ಜಯಂತಿ ಪೂರ್ವಭಾವಿ ಸಭೆಯಲ್ಲಿ ಬುಧವಾರ ನಡೆಯಿತು.

    ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಜಯಂತಿ ಆಚರಣೆ ಸಂಬಂಧ ತಹಶೀಲ್ದಾರ್ ಕರಿಯಪ್ಪನಾಯ್ಕ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧ ತಹಶೀಲ್ದಾರ್ ನ್ಯಾಯಾಲಯದ ಸಭಾಂಗಣದಲ್ಲಿ ಸಭೆ ನಡೆಯಿತು.

    ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಿವಲಿಂಗಯ್ಯ ಮಾತನಾಡಿ, ಪ್ರತಿ ವರ್ಷ ಏ.5ರಂದು ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಸರಳವಾಗಿ ಆಚರಿಸಿ, ಬಳಿಕ ಏ.14ರಂದು ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ವೇಳೆ ಇಬ್ಬರು ಮಹಾನ್ ನಾಯಕರ ಜಯಂತಿಯನ್ನು ಒಟ್ಟಿಗೆ ಅದ್ದೂರಿಯಾಗಿ ಬಹಳ ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ವರ್ಷವೂ ಆಚರಣೆ ಮಾಡಬೇಕೆಂದು ಸಭೆ ಗಮನಕ್ಕೆ ತಂದರು.

    ಒಟ್ಟಿಗೆ ಆಚರಿಸಲು ಛಲವಾದಿ ಮುಖಂಡರ ವಿರೋಧ: ಆಗ ಛಲವಾದಿ (ಬಲಗೈ) ಸಮುದಾಯದ ಮುಖಂಡ ಬಿ.ಜಿ. ಗಂಗಾಧರ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿಯನ್ನು ಒಟ್ಟಿಗೆ ಆಚರಣೆ ಮಾಡುವುದು ಸರಿಯಲ್ಲ ಎಂದು ವಿರೋಧಿಸಿದರು.

    ಬೇರೆಯಾಗಿ ಆಚರಿಸಲು ಮಾದರ ಮಹಾಸಭಾ ವಿರೋಧ: ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷ ಮಲ್ಲಿಪಾಳ್ಯ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ಪ್ರತಿವರ್ಷ ಡಾ.ಬಿ.ಆರ್.ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಜಯಂತಿಯನ್ನು ಒಟ್ಟಿಗೆ ಹೇಗೆ ಆಚರಣೆ ಮಾಡಿಕೊಂಡು ಬರುತ್ತಿದ್ದೇವೋ ಹಾಗೆ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಆಶಯ. ಇತರ ಸಮುದಾಯದವರು ನಮ್ಮನ್ನು ಗಮನಿಸುತ್ತಿದ್ದಾರೆ. ಈ ಹಿಂದೆ ಸಾಕಷ್ಟು ತಹಶೀಲ್ದಾರ್‌ಗಳು ಬಂದು ಹೋಗಿದ್ದಾರೆ. ಹೊಸ ಬೆಳವಣಿಗೆ ಮಾಡಿದರೆ ನಿಮಗೆ ಕಳಂಕ ಬರುತ್ತದೆ ಎಂದು ತಹಸೀಲ್ದಾರ್ ಕರಿಯಪ್ಪನಾಯ್ಕ ಅವರಿಗೆ ಎಚ್ಚರಿಸಿದರು.

    ಅಂಬೇಡ್ಕರ್ ಫೋಟೋ ಜೊತೆ ಜಗಜೀವನರಾಂ ಫೋಟೋಗೆ ವಿರೋಧ: ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಫೋಟೋ ಜೊತೆ ಬಾಬು ಜಗಜೀವನರಾಂ ಫೋಟೋವನ್ನು ಇಡುವುದಾಗಿ ತಹಶೀಲ್ದಾರ್ ಕರಿಯಪ್ಪನಾಯ್ಕ ತಿಳಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಛಲವಾದಿ ಮುಖಂಡ ಬಿ.ಜಿ.ಗಂಗಾಧರ್, ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋದೊಂದಿಗೆ ಜಗಜೀವನರಾಂ ಅವರ ಫೋಟೋ ಇಡಲು ನಾವು ಅವಕಾಶ ನೀಡುವುದಿಲ್ಲ ಎಂದರು. ಆಗ ಮಾದಿಗ ಮುಖಂಡರಾದ ಎ. ಶಿವಶಂಕರ್, ಮಲ್ಲಿಪಾಳ್ಯ ಶ್ರೀನಿವಾಸ್, ನಿಮ್ಮ ಸಮುದಾಯ ನಿಮಗೆ ಹೇಗೆ ಹೆಚ್ಚೋ ಹಾಗೆ ನಮ್ಮ ಸಮುದಾಯವು ನಮಗೆ ಹೆಚ್ಚು. ಈ ಸಭೆಯಲ್ಲಿ ನೀವು ಹೀಗೆ ಮಾತನಾಡಬಾರದು ಎಂದು ತಾಕೀತು ಪಡಿಸಿದರು.

    ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಒತ್ತಾಯ: ಈವರೆಗೂ ಅಂಬೇಡ್ಕರ್ ಅವರ ಪ್ರತಿಮೆ ಸಂಬಂಧ ಶಾಸಕರಾಗಲಿ, ತಾಲೂಕು ಆಡಳಿತವಾಗಲಿ ಅಥವಾ ಸ್ಥಳೀಯ ಪುರಸಭೆಯಾಗಲಿ ಕ್ರಮಕೈಗೊಂಡು ಪ್ರತಿಮೆ ನಿರ್ಮಾಣಕ್ಕಾಗಿ ಗುರುತಿಸಿಲ್ಲ ಎಂದು ಮಲ್ಲಿಪಾಳ್ಯ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು. ನೀವೇನಾದರೂ ಈ ಕೆಲಸ ಮಾಡದಿದ್ದರೆ ನನ್ನ ಸ್ವಂತ ಹಣದಿಂದ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ತಹಶೀಲ್ದಾರ್ ಗಮನಕ್ಕೆ ತಂದರು.

    ಈ ಸಂಬಂಧ ಶಾಸಕರೊಂದಿಗೆ ಮಾತನಾಡಿ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ಕರಿಯಪ್ಪನಾಯ್ಕ ಭರವಸೆ ನೀಡಿದರು. ಸಭೆಯಲ್ಲಿ ತಾ.ಪಂ ಇಒ ವಸಂತಕುಮಾರ್, ಪ್ರಭಾರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾ ಮಣಿ, ಟಿಎಚ್‌ ಒ ಡಾ. ಮರಿಯಪ್ಪ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.