ಕುಣಿಗಲ್: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ನಾಗರಿಕರು ಗೌರವಿಸಬೇಕು. ಅಂತೆಯೇ ಪೌರಕಾರ್ಮಿಕರು ಪೌರರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕಿದೆ ಎಂದು ಶಾಸಕ ರಂಗನಾಥ್ ತಿಳಿಸಿದರು.
ಪುರಸಭೆಯಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ನಿವೇಶನ ನೀಡಲು ಮೂರು ಎಕರೆ ಜಮೀನು ಗುರುತಿಸಲಾಗಿದ್ದು, ರಸ್ತೆ ಸಮಸ್ಯೆ ಬಗೆಹರಿಯದ ಕಾರಣ ವಿತರಣೆ ತಡವಾಗಿದ್ದು, ಸಮಸ್ಯೆ ಬಗೆಹರಿಸಲು ತಹಶೀಲ್ದಾರ್ ಅರವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸಿ ನಿವೇಶನ ಹಂಚಿಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲೆಂದರಲ್ಲಿ ಕಸ ಸುರಿಯುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಜಾಗೃತಿ ಮೂಡಿಸಬೇಕಿದೆ, ದುಶ್ಚಟಗಳಿಂದ ದೂರವಿದ್ದು,, ಕೀಳರಿಮೆ ಬಿಟ್ಟು ಕರ್ತವ್ಯ ನಿರ್ವಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲು ಸಲಹೆ ನೀಡಿದರು.
ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮೆ ಉಪವಾಸ ಮಾಡಿ, ದುಶ್ಚಟಗಳಿಂದ ದೂರವಿರಿ. ಪ್ರತಿವರ್ಷ ಉತ್ತಮ ಪೌರ ಕಾರ್ಮಿಕರಿಗೆ 25 ಸಾವಿರ ಬಹುಮಾನ ಘೋಷಣೆ ಮಾಡಿದರು.
ಪುರಸಭೆ ಅಧ್ಯಕ್ಷೆ ಮಂಜುಳಾ ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷೆ ಅಸ್ಮಾ, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ಕೃಷ್ಣ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC