ಹಲಗೂರು: ಮಂಡ್ಯ ಜಿಲ್ಲೆಯಲ್ಲಿ ಕುರಿ, ಮೇಕೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳಿಂದ 60 ಸಾವಿರ ನಗದು ಹಾಗೂ ಕಳ್ಳತನಕ್ಕೆ ಬಳಸಿದ ಇನ್ನೋವ ಕಾರು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಪೊಲೀಸ್ ಅಧೀಕ್ಷಕರಾದ ವೇಣುಗೋಪಾಲ್, ಡಿವೈಎಸ್ ಪಿ ನವೀನ್ ಕುಮಾರ್, ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.
ಮುಖ್ಯಪೇದೆಗಳಾದ ರಿಯಾಜ್, ಉಮೇಶ್, ಪ್ರಭುಸ್ವಾಮಿ, ನಾಗೇಂದ್ರ, ಜಯಕುಮಾರ್, ಸಿದ್ದರಾಜ್, ಮಲ್ಲಿಕಾರ್ಜುನ ತುಳುಕಿ, ರವಿ ಡಿ.ವೈ. ಅವರ ತಂಡ ಆರೋಪಿಗಳನ್ನು ದಸ್ತಗಿರಿ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


