ಬೆಳಗಾವಿ : 75ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ ಕುಶಲಕರ್ಮಿಗಳಿಗಾಗಿ ಸಾಲ ಸಹಾಯಧನ (ಸಬ್ಸಿಡಿ) ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬೆಳಗಾವಿ ಜಿಲ್ಲೆಯ ವಿವಿಧ ವರ್ಗಗಳ ಕುಶಲಕರ್ಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ರೂ 50 ಸಾವಿರವರೆಗೆ ಸಾಲದ ಮೇಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಶೇ 30% ರಷ್ಟು ಗರಿಷ್ಟ 15 ಸಾವಿರದ ವರೆಗೆ ಸಹಾಯಧನ ನೀಡಲಾಗುವುದು.
ಕುಶಲಕರ್ಮಿಗಳು ಕನಿಷ್ಠ 18 ವರ್ಷ ತುಂಬಿರಬೇಕು. ಕುಶಲವೃತ್ತಿಗಾಗಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಒಬ್ಬರಿಗೆ ಒಂದು ಬಾರಿ ಮಾತ್ರ ಸಹಾಯಧನ ನೀಡಲಾಗುವುದು.
ಕುಶಲಕರ್ಮಿಗಳು ರಾಜ್ಯ ಕುಶಲಕರ್ಮಿ ಅಭಿವೃದ್ಧಿ ನಿಗಮ/ ಅಭಿವೃದ್ಧಿ ಆಯುಕ್ತರು (ಕರಕುಶಲ) ಕಚೇರಿಯಲ್ಲಿ ನೋಂದಣಿ ಆಗಿರಬೇಕು. ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿಗಳು, ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ಸಂಬಂಧಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರ ( ಪಿಡಿಓ ) ರವರಿಂದ ಕರಕುಶಲರೆಂದು ದೃಡೀಕರಣ ಪತ್ರ ಪಡೆದಿರಬೇಕು.
ಸದರಿ ಯೋಜನೆ ಅಡಿಯಲ್ಲಿ ಕಮ್ಮಾರಿಕೆ, ಬಡಿಗತನ, ಬುಟ್ಟಿ ಹೆಣೆಯುವುದು, ಕಲ್ಲಿನ ಕೆತ್ತನೆ, ಬಿದಿರು, ಕಂಬಳಿ ನೇವುವವರು ಇತ್ಯಾದಿ ಸರ್ಕಾರಿ ಆದೇಶದ ಪ್ರಕಾರ ಅರ್ಹವಿರುವ ಕುಶಲಕರ್ಮಿ ಚಟುವಟಿಕೆಗಳು ಇರುತ್ತವೆ. ಕುಶಲಕರ್ಮಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು 25 ಜನವರಿ 2023 ಕೊನೆ ದಿನವಾಗಿರುತ್ತದೆ
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಉದ್ಯಮ ಬಾಗ್, ಬೆಳಗಾವಿ ಕಚೇರಿ ದೂರವಾಣಿ ಸಂಖ್ಯೆ 0831-2440187 ಹಾಗೂ ಉಪನಿರ್ದೇಶಕರು, (ಖಾಗ್ರಾ), ಬೆಳಗಾವಿ ಮತ್ತು ಮೊಬೈಲ್ ಸಂಖ್ಯೆ 6362546707 (ಶ್ವೇತಾ ಹೊಸಮನಿ), 9448866919 (ಎ. ಆಯ. ಪಠಾನ್) ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


