ಬೀದರ್: ಜಿಲ್ಲೆಯ ಕಮಲನಗರ ತಾಲ್ಲೂಕಿನ ಕುಶನೂರ ಪೊಲೀಸ್ ಠಾಣೆಯ ವತಿಯಿಂದ ಕುಶನೂರ ಗ್ರಾಮದ ಬಸವೇಶ್ವರ ವೃತ್ತದ ಬಳಿ ಪೊಲೀಸರು ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದರು.
ಕಮಲನಗರ ತಾಲೂಕು ಸಿಪಿಐ ಅಮರಪ್ಪ ಶಿವಬಲ್ ನೇತೃತ್ವದಲ್ಲಿ ಕುಶನೂರ ಪಿಎಸ್ ಐ ಸುಖಾನಂದ ಹಾಗೂ ಪೊಲೀಸರ ತಂಡ ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುತ್ತಿರುವವರನ್ನು ತಡೆದು ದಂಡ ವಿಧಿಸುವ ಬದಲು, ಹೆಲ್ಮೆಟ್ ನೀಡಿ ಅವರಿಗೆ ರಸ್ತೆ ಸುರಕ್ಷತೆ ಹಾಗೂ ಹೆಲ್ಮೆಟ್ ಧರಿಸುವಿಕೆಯ ಮಹತ್ವವನ್ನು ತಿಳಿಸಿಕೊಟ್ಟರು.
ಹೆಲ್ಮೆಟ್ ಧರಿಸದ ಹಿನ್ನೆಲೆ ಸಾಕಷ್ಟು ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಹಾಗಾಗಿ, ಪೊಲೀಸರು ಕೇವಲ ದಂಡ ಹಾಕುವುದಕ್ಕೆ ಮಾತ್ರ ಸೀಮಿತವಾಗದೇ, ಜಾಗೃತಿಯೂ ಮೂಡಿಸುವ ಮೂಲಕ ಜನಸ್ನೇಹಿಯಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯ್ತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4