ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಕುಶನೂರ ಪೊಲೀಸ್ ಠಾಣೆಯ ಪಿ.ಎಸ್.ಐ. ಸುಖಾನಂದ ತಮ್ಮ ಅಧಿಕಾರಿ ಸಿಬ್ಬಂದಿಯೊಂದಿಗೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಜಾಗೃತಿ ಮೂಡಿಸಿದರು.
ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿರುವ ಸವಾರರನ್ನು ತಡೆದು, ದಂಡ ಪಾವತಿಸುವ ಬದಲು ಹೆಲ್ಮೆಟ್ ಹಾಗೂ ಗುಲಾಬಿ ಹೂವು ನೀಡಿ ರಸ್ತೆ ಸುರಕ್ಷತೆಯ ಬಗ್ಗೆ, ಹೆಲ್ಮೆಟ್ ಧರಿಸುವಿಕೆಯ ಮಹತ್ವದ ಬಗ್ಗೆ ತಿಳಿ ಹೇಳಲಾಯಿತು.
ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಮಾಣ ಇಳಿಸಲು, ಪ್ರಾಣ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಕುಶನೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ಈ ಕಾರ್ಯಕ್ರಮ ಸಾರ್ವಜನಿಕರು ಮೆಚ್ಚುಗೆಗೆ ಪಾತ್ರವಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4