ತುಮಕೂರು: ಮಳೆ ಅವಾಂತರದಿಂದಾಗಿ ವಿದ್ಯುತ್ ಶಾಕ್ ಹೊಡೆದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, 6 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು.
ಸರ್ಕಾರದಿಂದ 5 ಲಕ್ಷ ಹಾಗೂ ಮಹಾನಗರ ಪಾಲಿಕೆಯಿಂದ 1 ಲಕ್ಷ ಪರಿಹಾರ ನೀಡಲಾಯಿತು. ಝೀರೋ ಟ್ರಾಫಿಕ್ ನಲ್ಲಿ ಮಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ ಗೃಹಸಚಿವರು. 20 ನಿಮಿಷಗಳ ಕಾಲ ಮಳೆ ಹಾನಿ ವೀಕ್ಷಿಸಿ ಬಳಿಕ ತೆರಳಿದರು.
ಗೃಹಸಚಿವರ ಭೇಟಿ ಹಿನ್ನೆಲೆಯಲ್ಲಿ ಅರ್ಧಗಂಟೆಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಹಾನಗರ ಪಾಲಿಕೆ, ಚರ್ಚ್ ಸರ್ಕಲ್, ಕೋಟೆ ಆಂಜನೇಯ ದೇವಾಲಯ ಮುಂಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜಡಿ ಮಳೆಯಲ್ಲಿ ಸಿಲುಕಿದ ಪ್ರಯಾಣಿಕರು ಹಿಡಿಶಾಪ ಹಾಕಿರುವುದು ಕಂಡು ಬಂತು.
ತುಮಕೂರಿನ ಎಸ್ ಮಾಲ್, ಅಮಾನಿಕೆರೆ ಹಾಗೂ ಕೋತಿತೋಪು ಬಳಿಯಿರುವ ಮನೆಗಳಿಗೆ ಸಚಿವರು ಭೇಟಿ ನೀಡಿದರು. ಗೃಹ ಸಚಿವರ ಜೊತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಶಾಸಕ ಜ್ಯೋತಿ ಗಣೇಶ್, ಹಾಗೂ ಅಧಿಕಾರಿಗಳು ಇದ್ದರು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz