ಸರಗೂರು: ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ’ ಎಂದು ಮಾಜಿ ರಾಜ್ಯ ನಿರ್ದೇಶಕ ಹಾಗೂ ಯುವ ಸಬಲೀಕರಣ ಇಲಾಖೆ ಎಂ.ಎಂ.ನಟರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ದಂದು ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತಿಯನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಹದೊಂದಿಗೆ ಹಮ್ಮಿಕೊಂಡಿದ್ದ ವಿಶ್ವ ಮಾನವ ಕುವೆಂಪು ರವರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಾತಿ–ಮತಗಳನ್ನು ಬಹಿಷ್ಕರಿಸುವ ಬಸವ, ಬುದ್ಧ, ಅಂಬೇಡ್ಕರ್ ಅವರ ವಿಚಾರಗಳನ್ನು ಹೊಸ ರೂಪದಲ್ಲಿ ಕುವೆಂಪು ಅವರು ನಾಡಿಗೆ ಪರಿಚಯಿಸಿದ್ದಾರೆ’ ಎಂದು ನುಡಿದರು.
ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ ಎಂದರು.
ಮಾಜಿ ಜಿಪಂ ಸದಸ್ಯ ಪಿ.ರವಿ ಮಾತನಾಡಿ, ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದರು’ ಎಂದು ಸ್ಮರಿಸಿದರು.
ಅವರ ವೈಚಾರಿಕತೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಅನನ್ಯವಾದುದು’ ಎಂದರು.
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಎಂಎಂ ಕೆ ಕಾಲೇಜಿನ ಉಪನ್ಯಾಸಕ ಸಿದ್ದಾರ್ಥ್ ರವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ. ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ರಚಿಸಿ, ರಾಜ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿದ್ದಾರೆ. ಅವರಿಗೆ ಯುಗದ ಕವಿ ಹಾಗೂ ಜಗದ ಕವಿ ಎಂಬ ಬಿರುದುಗಳಿವೆ. ವಿಭಿನ್ನ ಆಯಾಮಗಳ ಮೂಲಕ ವಿಶ್ವ ಮಾನವ ಸಂದೇಶವನ್ನು ವಿಶ್ವಕ್ಕೆ ಪರಿಚಯಿಸಿದ ಮೊದಲ ಯುಗದ ಕವಿ’ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಮೋಹನಕುಮಾರಿ ರವರು ವ್ಯಕ್ತಿ ಹುಟ್ಟುವಾಗ ವಿಶ್ವಮಾನವನಾಗಿದ್ದು, ಬೆಳೆಯುತ್ತಾ ಅಲ್ಪಮಾನವನಾಗುತ್ತಾನೆ. ಹೀಗಾಗಿ ಭಾಷೆ, ಪ್ರದೇಶ, ನಾಡು–ನುಡಿಗಳ ಮೇಲೆ ಅಭಿಮಾನವಿಟ್ಟು ಮತ್ತೆ ವಿಶ್ವಮಾನವರಾಗಬೇಕಾಗಿದೆ ಎಂದು ಕುವೆಂಪು ಪ್ರತಿಪಾದಿಸಿದ್ದರು. ಅದನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಶೃತಿ ಜ್ಞಾನ, ಮತಿ ಜ್ಞಾನದ ಮೂಲಕ ಅನುಭೂತಿ ಜ್ಞಾನಕ್ಕೇರಬೇಕು ಎನ್ನುವುದು ಕುವೆಂಪು ಕಂಡುಕೊಂಡ ಸತ್ಯ. ಹೀಗಾಗಿಯೇ ಅವರು ಪಂಚ ತತ್ವ ಹಾಗೂ ಸಪ್ತ ಸೂತ್ರಗಳ ಮೂಲಕ ಬದುಕನ್ನು ರೂಪಿಸಲು ಸಲಹೆ ನೀಡುತ್ತಿದ್ದರು . ಜಾತಿ ಮತಗಳನ್ನು ಮೀರಿ ಧರ್ಮ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂಬುದು ಕುವೆಂಪು ರವರ ವಾದವಾಗಿತ್ತು ಎಂದರು.
ಸಾಗರೆ ಆರೋಗ್ಯ ಕೇಂದ್ರ ಆರೋಗ್ಯಾಧಿಕಾರಿ ಡಾ.ಶರತ್, ಪಪಂ ಸದಸ್ಯ ಶ್ರೀನಿವಾಸ, ಗ್ರಾಪಂ ಹಾಗೂ ಒಕ್ಕಲಿಗ ಸಂಘದ ಅಧ್ಯಕ್ಷ ಎಸ್.ಎನ್.ಸುಧೀರ್, ಮಹೇಶ್, ಮಾತನಾಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಚೈತ್ರ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ, ಮಾಜಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಮಾಜಿ ಜಿಪಂ ಸದಸ್ಯ ಚಿಕ್ಕವೀರನಾಯಕ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ನಾಮಧಾರಿ ಗೌಡ ಸಮಾಜದ ತಾಲ್ಲೂಕು ಅಧ್ಯಕ್ಷ ರತ್ನಯ್ಯ, ಪಪಂ ಮಾಜಿ ಸದಸ್ಯ ರಮೇಶ, ನಾಯಕ ಸಮಾಜದ ಮುಖಂಡ ಶಂಭುಲಿಂಗಯ್ಯ, ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಮ್, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ನಾಗರಾಜು, ಕಸಾಪ ಪ್ರದಾನ ಕಾರ್ಯದರ್ಶಿ ನಿಂಗರಾಜು, ಬಂಗಾರಯ್ಯ, ದಾಸಚಾರಿ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ, ಮುಖಂಡರು ಅಣ್ಣಯ್ಯ ಸ್ವಾಮಿ, ಮಹೇಶ್, ಮಲ್ಲೇಶ್, ನಿವೃತ್ತ ಪಿಡಿಒ ಲಿಂಗಚಾರ್, ಒಕ್ಕಲಿಗ ಸಂಘದ ನಿರ್ದೇಶಕ ಸಕಲೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶಾಂಭವಿ ಮೂರ್ತಿ, ಸಿಬ್ಬಂದಿಗಳು ವರ್ಗದವರು ಸುನೀಲ್, ಮನೋಹರ್, ಮುಜೀಬ್, ರವಿಚಂದ್ರನ್, ಪುರುಷೋತ್ತಮ್, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


