ಕುವೈತ್ ನ ವಸತಿ ಅಪಾರ್ಟ್ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರು ಸೇರಿದಂತೆ ಒಟ್ಟು 49 ಜನ ಸಜೀವ ದಹನವಾಗಿದ್ದಾರೆ. ಇದೀಗ ಖ್ಯಾತ ಎನ್ ಆರ್ ಐ ಉದ್ಯಮಿ ಮತ್ತು ಯುಎಇ ಮೂಲದ ಲುಲು ಗ್ರೂಪ್ ಅಧ್ಯಕ್ಷ ಎಂಎ ಯೂಸುಫ್ ಅಲಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕುವೈತ್ ನ ದಕ್ಷಿಣ ನಗರವಾದ ಮಂಗಾಫ್ ನಲ್ಲಿ 196 ವಲಸೆ ಕಾರ್ಮಿಕರು ತಂಗಿದ್ದ ಏಳು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿತ್ತು.
ಘಟನೆಯಲ್ಲಿ ಕನಿಷ್ಠ 49 ವಿದೇಶಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ. ಪರಿಹಾರ ನಿಧಿಯ ಭಾಗವಾಗಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ನೀಡಲಾಗುವುದು ಎಂದು ಅಬುಧಾಬಿಯಲ್ಲಿ ಲುಲು ಗ್ರೂಪ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರ ಮತ್ತು ಕೇರಳ ಸರ್ಕಾರ ಕೂಡ ಮೃತರ ಕುಟುಂಬಕ್ಕೆ ಇದೇ ರೀತಿಯ ಪರಿಹಾರ ಘೋಷಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA