nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್
    ಕೊರಟಗೆರೆ January 14, 2022

    ಕೆ.ವಿ.ಕೆ. ಮತ್ತು ರೈತರ ಖುಷ್ಕಿ ಬೇಸಾಯದ ಸಾಧನೆ ವೀಕ್ಷಿಸಿ ಅಭಿನಂದಿಸಿದ ಶಾಸಕ ಡಾ.ಜಿ.ಪರಮೇಶ್ವರ್

    By adminJanuary 14, 2022No Comments2 Mins Read
    g parameshwar

    ಕೊರಟಗೆರೆ: ತಾಲೂಕಿನ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಯನ್ನು ಹಿರೇಹಳ್ಳಿಯ ಕೆ.ವಿ.ಕೆ ವಿಜ್ಞಾನಿಗಳು ಮತ್ತು ನಮ್ಮ ರೈತರು ಶ್ರಮವಹಿಸಿ ಯಶಸ್ವಿಗೊಳಿಸಿರುವುದು ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

    ತಾಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಗೆ ಎಲೆರಾಂಪುರ ಗ್ರಾಮ ಪಂಚಾಯ್ತಿಗೆ ಕೇಂದ್ರ ಸರ್ಕಾರದ ಉತ್ತಮ್ ಪಂಚಾಯತ್ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಡಿ ನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು,  ಯೋಜನೆಯ ಸಮಗ್ರ ಅಭಿವೃದ್ದಿಯನ್ನು ಪರಿಶೀಲಿಸಿ ಮಾತನಾಡಿದರು.

    2010 ರಲ್ಲಿ ಪ್ರಾರಂಭವಾದ ಈ ಯೋಜನೆ ಇಲ್ಲಿಯವರೆಗು ಬಹಳ ವ್ಯವಸ್ಥಿತವಾಗಿ ನಡೆದಿದೆ. ಹಿರೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಈ ಯೋಜನೆಯನ್ನು ಉತ್ತಮವಾಗಿ ಸಾಕಾರ ಮಾಡಿದ್ದಾರೆ.  ನಮ್ಮ ರೈತರು ಇದನ್ನು ಒಪ್ಪಿಕೊಂಡು ಯಶಸ್ವಿಗೊಳಿಸಿದ್ದಾರೆ. ಈ ಯೋಜನೆ ಮಳೆಯಾದಾರಿತ ಖುಷ್ಕಿ ಬೇಸಾಯದ ರೈತರಿಗೆ ಅತ್ಯುತ್ತಮವಾಗಿ ಉಪಯುಕ್ತವಾಗಿದೆ. ಒಣಪ್ರದೇಶದಲ್ಲಿ ಲಾಭದಾಯಕ ಗೋಡಂಬಿ, ನಲ್ಲಿ, ಹುಣಸೆ ಸೇರಿದಂತೆ. ಇತರೆ ವಾಣಿಜ್ಯಬೆಳೆಗಳನ್ನು ಸಹ  ಇಳಿಜಾರಿನ ಮಳೆನೀರನ್ನು ಉಪಯೋಗಿಸಿಕೊಂಡು ಬೆಳೆದಿರುವುದು ರೈತನ ಜೀವನ ಮಟ್ಟವನ್ನು ಸುಧಾರಿಸುತ್ತದೆ. ವ್ಯರ್ಥವಾಗಿ ಹರಿದುಹೋಗುವ ನೀರನ್ನು ತಡೆದುನಿಲ್ಲಿಸಿ ಉಪಯೋಗಮಾಡಿಕೊಂಡಿದ್ದು. ಕಡಿಮೆ ಮಳೆಯಲ್ಲಿಯೂ ನೀರನ್ನು ಸಂರಕ್ಷಣೆ ಮಾಡಿ ಬೇಸಾಯ ಮಾಡಿದ್ದು ಸುಮಾರು 85 ಕೃಷಿ ಹೋಂಡಾಗಳನ್ನು ಹಲವು ಚೆಕ್ ಡ್ಯಾಂ, ನಾಲಾ ಬದು, ಹೂಳೆತ್ತುವಿಕೆ, ಕೊಳವೆಬಾವಿ ಅಭಿವೃದ್ದಿ ಸೇರಿದಂತೆ ಮಾಡಿರುವ ಈ ಕೆಲಸಗಳು ನಿಜಕ್ಕು ಅಕಾಲಿಕ ಮಳೆಯನ್ನು ಕಡಿಮೆ ನೀರಿನ ಪ್ರಮಾಣವನ್ನು ತಡೆದುಕೊಳ್ಳುವ ಕೃಷಿ ಪದ್ದತಿಯಾಗಿದ್ದು, ಕೊರಟಗೆರೆ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಬಯಲು ಸೀಮೆಯ ಮಳೆಯಾಧಾರಿತ ಪ್ರದೇಶಗಳ ಒಣ ಬೇಸಾಯಕ್ಕೆ ಈ ಯೋಜನೆ ವಿಸ್ತಾರವಾಗಬೇಕಿದ್ದು, ರಾಜ್ಯ ಸರ್ಕಾರವು ಇದಕ್ಕೆ ಕೈಜೋಡಿಸಬೇಕಾಗಿದೆ. ಯೋಜನೆ ಯಶಸ್ವಿಗೆ ಕೃಷಿ ವಿಜ್ಞಾನಿಗಳು, ರೈತರು ಗ್ರಾಮ ಪಂಚಾಯತಿಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

    ಹಿರೇಹಳ್ಳಿಯ ಕೆ.ವಿ.ಕೆ. ವಿಜ್ಞಾನಿ ಹಾಗೂ ಆಡಳಿತಾಧಿಕಾರಿ ಲೋಗಾನಂದನ್ ಮಾತನಾಡಿ, ಈ ಯೋಜನೆ ಜಲಾನಯನ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡಿದ್ದು 2010 ರಲ್ಲಿ ನಮ್ಮ ಇಲಾಖೆಯ ಡಿ.ಜಿ. ರವರು ಉದ್ಘಾಟನೆ ಮಾಡಿದ್ದು ಯಶಸ್ವಿಗೆ ಎಲ್ಲರು ಕಾರಣರಾಗಿದ್ದಾರೆ.  ಈ ಯೋಜನೆಯಲ್ಲಿ 2.00 ಲಕ್ಷ ಕ್ಯೂಬಿಕ್ ಲೀಟರ್ ನೀರನ್ನು ಸಂರಕ್ಷಿಸಲಾಗಿದೆ. ಯೋಜನೆಯಲ್ಲಿ ಕಡಿಮೆ ನೀರಿನ ವಾಣಿಜ್ಯ ಬೆಳೆಗಳ ಕೃಷಿಯೊಂದಿಗೆ ನೂತನ ಸಂಶೋಧನೆಯ ಭತ್ತ, ತೊಗರಿ, ರಾಗಿ ಬೆಳೆಗಳನ್ನು ಬೆಳೆಯಲಾಗಿದೆ. ಕಷ್ಟಕರ ವಾತಾವರಣದಲ್ಲಿಯು ಸಹ ಕೃಷಿ ಮಾಡುವ ಸಂಶೋಧನೆಯ ಬೆಳೆಗಳನ್ನು ಬೆಳೆಯಲು ಆದ್ಯತೆ ನೀಡಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಡಿ.ನಾಗೇನಹಳ್ಳಿಯ ರೈತರ ಗ್ರಾಮ ವಿಕಾಸ ಚೇತನಕ್ಕೆ ಅರ್ಧ ಎಕರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಎಕರೆ ಹಾಗೂ ಸ್ತ್ರೀ ಶಕ್ತಿ ಕೇಂದ್ರಕ್ಕೆ ಅರ್ಧ ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ, ಆದರೆ ಪ್ರಾಮಾಣಿಕತೆಯ ಕೊರತೆ ಕಂಡುಬರುತ್ತಿದೆ. ಇದನ್ನು ಹೋಗಲಾಡಿಸಲು ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯತೆ…

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.