ಚಾಮರಾಜನಗರ: ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆದ ಅಚಾನಕ್ ಘಟನೆಯಿಂದ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಬಿಸಲವಾಡಿ ಗ್ರಾಮದಲ್ಲಿ ನಡೆಯುತ್ತಿರುವ ಕ್ಚಾರಿಯೊಂದರಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಬಂಧಿಸಿದ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಿಸಲವಾಡಿ ಗ್ರಾಮದಲ್ಲಿರುವ ಭಾಸ್ಕರ್ ಎಂಬುವವರ ಕ್ವಾರಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಕ್ವಾರಿಯಲ್ಲಿ ಕೆಲಸ ಮಾಡುತ್ತಿರುವಾಗ ಸಡಿಲವಾದ್ದರಿಂದ ಕಲ್ಲು ಕುಸಿದು ಈ ಘಟನೆ ನಡೆದಿದೆ. ಬಂಡೆಯ ಮೇಲುಗಡೆ ನಿಂತು ಕುಳಿ ತೆಗೆಯುವಾಗ ಈ ಘಟನೆ ಸಂಭವಿಸಿದ್ದು ಮೃತರು ಹೊರರಾಜ್ಯದವರೊ ಅಥವಾ ಸ್ಥಳೀಯರೊ ಎಂಬುದನ್ನ ಇಲಾಖೆ ಖಾತ್ರಿಪಡಿಸಬೇಕಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


