ಮುಂದಿನ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವರು ಘೋಷಣೆ ಮಾಡಿದರು. ಮುಂದಿನ 7 ದಿನಗಳಲ್ಲಿ ಸಿಎಎ ಜಾರಿಗೆ ಬರಲಿದೆ. ಈ ಕಾನೂನು ಬಂಗಾಳದಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಜಾರಿಯಾಗಲಿದೆ ಎಂದರು.
“ಮುಂದಿನ ಏಳು ದಿನಗಳಲ್ಲಿ ಸಿಎಎ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಜಾರಿಗೆ ಬರಲಿದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ, ”ಎಂದು ಶಾಂತನು ಠಾಕೂರ್ ಸಾರ್ವಜನಿಕ ಸಭೆಯಲ್ಲಿ ಹೇಳಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಎಎಯನ್ನು ಜಾರಿಗೆ ತರುತ್ತದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು.
ಸಿಎಎಯನ್ನು ವಿರೋಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿರಿಸಿಕೊಂಡಿವೆ. ಕೋಲ್ಕತ್ತಾದ ಐಕಾನಿಕ್ ಎಸ್ ಪ್ಲೇನೇಡ್ ನಲ್ಲಿ ನಡೆದ ರ್ಯಾಲಿಯಲ್ಲಿ, ಒಳನುಸುಳುವಿಕೆ, ಭ್ರಷ್ಟಾಚಾರ, ರಾಜಕೀಯ ಹಿಂಸಾಚಾರ ಮತ್ತು ತುಷ್ಟೀಕರಣದ ವಿಷಯಗಳ ಕುರಿತು ಮಮತಾ ಬ್ಯಾನರ್ಜಿ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದರು ಮತ್ತು 2026 ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಆರಿಸುವಂತೆ ಜನರಿಗೆ ಮನವಿ ಮಾಡಿದರು.


