ತಿಪಟೂರು: ರೈಲು ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮಾರನಗೆರೆ ಗೇಟ್ ಸಮೀಪ ನೆನ್ನೆ ರಾತ್ರಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ(31) ಬಿನ್ ವೆಂಕಟೇಶ ಮೂರ್ತಿ ಎಂಬವರು ಮೃತಪಟ್ಟವರಾಗಿದ್ದಾರೆ.
ನಿನ್ನೆ ರಾತ್ರಿ ರೈಲು ಡಿಕ್ಕಿ ಹೊಡೆದ ಪರಿಣಾಮ ನರಸಿಂಹಮೂರ್ತಿ ಅವರ ತಲೆ ಹಾಗೂ ಬೆನ್ನಿಗೆ ಗಂಭೀರವಾಗಿ ಏಟು ತಗುಲಿತ್ತು. ಕಿವಿ ಹಾಗೂ ಮೂಗಿನಿಂದ ರಕ್ತ ಸ್ರಾವವಾಗಿರುವುದು ಕಂಡು ಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಅರಸೀಕೆರೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4