nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳಲ್ಲಿ ಕ್ರೀಡಾ ಶಿಸ್ತಿನ ಕೊರತೆ ಇದೆ: ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ
    Uncategorized August 22, 2024

    ವಿದ್ಯಾರ್ಥಿಗಳಲ್ಲಿ ಕ್ರೀಡಾ ಶಿಸ್ತಿನ ಕೊರತೆ ಇದೆ: ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ

    By adminAugust 22, 2024No Comments2 Mins Read
    indranamma

    ಪಾವಗಡ : ವಿದ್ಯಾರ್ಥಿಗಳಲ್ಲಿ ಕ್ರೀಡಾ ಶಿಸ್ತಿನ ಕೊರತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ತಿಳಿಸಿದರು.

    ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಪ್ರೌಢಶಾಲಾ ಹಂತದ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಶಿಸ್ತಿನ ಕೊರತೆ ಕಾಡುತ್ತಿದೆ. ಕೇವಲ ಪಠ್ಯ ವಿಷಯವಷ್ಟೆ ಸಾಲದು. ಮಗುವಿನ ದೈಹಿಕ ಬೆಳವಣಿಗೆಯೂ ಮುಖ್ಯವಾಗಿದೆ. ಕ್ರೀಡಾಕೂಟ ಆರಂಭವಾದ ಗಳಿಗೆಯಿಂದಲೂ ನೋಡುತ್ತಿದ್ದೇನೆ. ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಕಾಣುತ್ತಿಲ್ಲ. ಪ್ರತಿಶಾಲೆಯಲ್ಲಿ ಪ್ರತಿಭೆಗಳಿವೆ. ಅವುಗಳಿಗಳಿಗೆ ಅವಕಾಶ ಒದಗಿಸಲೆಂದೇ ಹೋಬಳಿ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳ ಆಯೋಜನೆಯಾಗುತ್ತಿದೆ. ಅವುಗಳನ್ನು ಬಳಸಿಕೊಂಡು ಮಕ್ಕಳು ಆಟೋಟಗಳ ಜೊತೆಗೆ ಆಂತರಿಕ ಶಿಸ್ತು ಬೆಳೆಸಿಕೊಳ್ಳಬೇಕು. ಅದಕ್ಕೆ ದೈಹಿಕ ಶಿಕ್ಷಕರು ಪೂರಕವಾಗಿ ನಿಲ್ಲಬೇಕು. ಅದಾಗದಿದ್ದಲ್ಲಿ ಕಾಟಾಚಾರದ ಕ್ರೀಡಾಕೂಟಗಳಾಗಿ ಎಲ್ಲವೂ ವ್ಯರ್ಥವಾಗುತ್ತವೆ ಎಂದರು.


    Provided by
    Provided by

    ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಂವಾದ ನಡೆಸಿದ ದೈಹಿಕ ಶಿಕ್ಷಕರು, ಆಟೋಟ ತರಗತಿಗಳನ್ನು ಸಹಾ ಓದಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ನಮಗೆ ತರಬೇತಿ ನೀಡಲು ಮತ್ತು ಮಕ್ಕಳು ದೈಹಿಕವಾಗಿ ಬೆಳೆಯಲು ಅವಕಾಶ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವುದು ಕಷ್ಟದ ವಿಷಯ. ದೈಹಿಕ ಶಿಕ್ಷಕರು ಕೇವಲ ಶಾಲಾ ಪ್ರಾರ್ಥನೆ ಮಾಡಿಸುವುದಕಷ್ಟೇ ಸೀಮಿತವಾಗಿರುವಂತ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಮ್ಮ ನೋವನ್ನು ತಿಳಿಸಿದರು.

    ಇದಕ್ಕೆ ಉತ್ತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯಲ್ಲಿ ಹತ್ತನೇ ತರಗತಿಯ ಫಲಿತಾಂಶ ಕಡಿಮೆಯಾಗಿರುವುದರಿಂದ ಅದರ ಪ್ರಗತಿಗಾಗಿ ಒತ್ತು ನೀಡಲು ತಿಳಿಸಿದ್ದಾರೆ. ಅದರನ್ವಯ ೧೦ನೇ ತರಗತಿಯ ಮಕ್ಕಳಿಗೆ ಕೆಲವೊಂದು ತರಗತಿಗಳನ್ನು ಬೋಧನೆಗಾಗಿ ಬಳಸಿಕೊಳ್ಳಲು ತಿಳಿಸಲಾಗಿದೆ. ಆದಾಗಿ ಈ ಸಮಸ್ಯೆ ಉದ್ಬವವಾಗಿರಬಹುದು ಎಂದರು.

    ಅದಕ್ಕೆ ಪ್ರತಿಕ್ರಿಯಿಸಿದ ದೈಹಿಕ ಶಿಕ್ಷಕರು ಕೇವಲ ಹತ್ತನೇ ತರಗತಿ ಮಾತ್ರವಲ್ಲದೆ ಎಲ್ಲಾ ತರಗತಿಗಳ ಮಕ್ಕಳಿಗೂ ದೈಹಿಕ ಶಿಕ್ಷಣ ತರಗತಿಗಳು ದೊರೆಯದ ಸ್ಥಿತಿ ಇದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ಸೈಯದ್ ಷಾನವಾಜ್, ಮುಖಂಡರಾದ ಎಸ್.ಟಿ.ನಾಗರಾಜ, ಕೋನೇರಪ್ಪ, ಭಗವಂತಪ್ಪ, ಶಿವಾನಂದಪ್ಪ, ಯೋಗೇಶ್, ಕ್ರೀಡಾಪಟುಗಳಾದ ಅಬ್ದುಲ್ ಶುಕೂರ್, ಇ.ಸಿ.ಓ ಶಿವಮೂರ್ತಿ, ಖಾಜಹುಸೇನ್, ಪಿಡಿಓ ಶ್ರೀರಾಮನಾಯ್ಕ, ಸಿದ್ದಾಪುರ ಮುಖ್ಯಶಿಕ್ಷಕರಾದ ರಾಜಬಾಬು,  ರಾಜಣ್ಣ,  ಸಂಸ್ಥೆಯ ಕಾರ್ಯದರ್ಶಿ ಆಂಜಿನೇಯಲು, ಐ.ಎ.ನಾರಾಯಣಪ್ಪ, ದೈಹಿಕ ಶಿಕ್ಷಣಾಧಿಕಾರಿ ಬಸವರಾಜು, ಯತಿಕುಮಾರ್, ಎಲ್ಲಾ ದೈಹಿಕ ಶಿಕ್ಷಕರು ಮತ್ತು ಸಾರ್ವಜನಿಕರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.