nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!
    ಕೊರಟಗೆರೆ October 24, 2025

    ಕೆರೆಯೋ, ರಸ್ತೆಯೋ: ಗೃಹ ಸಚಿವರ ಕ್ಷೇತ್ರದಲ್ಲಿ ಗುಂಡಿಮಯ ರಸ್ತೆಗಳು!

    By adminOctober 24, 2025No Comments2 Mins Read
    koratagere

    ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ, ತೋವಿನಕೆರೆ, ಕೋಳಾಲ ಹೋಬಳಿ ವ್ಯಾಪ್ತಿಯ ಗಡಿ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಹಲವು ರಸ್ತೆಗಳು ತೀವ್ರ ಹದಗೆಟ್ಟಿವೆ.

    ಹೊಳವನಹಳ್ಳಿ– ಬೊಮ್ಮಲದೇವಿಪುರ ಸಂಪರ್ಕ ರಸ್ತೆ ಮತ್ತು ಅಕ್ಕಾಜಿಹಳ್ಳಿಯಿಂದ ಬೈರೇನಹಳ್ಳಿ ಸಂಪರ್ಕಿಸುವ ರಸ್ತೆ ಅಲ್ಲಲ್ಲಿ ಸಂಪೂರ್ಣ ಹಾಳಾಗಿದೆ. ಇದು ತಾಲ್ಲೂಕಿನ ಗಡಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯಾಗಿದ್ದು, ಅಭಿವೃದ್ಧಿ ಕಾಣದ ಈ ಭಾಗದ ಜನರು ನಿತ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

    ತೋವಿನಕೆರೆ–ಚಿಕ್ಕತೊಟ್ಟುಕೆರೆ ಸಂಪರ್ಕಿಸುವ ರಸ್ತೆಯ ಕುಚ್ಚಂಗಿ ಗೇಟ್ ಬಳಿ ರೈಲ್ವೆ ಕಾಮಗಾರಿ ಸ್ಥಗಿತಗೊಂಡಿರುವ ಸ್ಥಳದಲ್ಲಿ ರಸ್ತೆ ತೀವ್ರ ಹಾಳಾಗಿದೆ. ಮೊಣಕಾಲು ಉದ್ದದ ಗುಂಡಿಗಳು ಬಿದ್ದು ನೀರು ತುಂಬಿಕೊಂಡು ಕೆರೆಯಂತಾಗಿರುವ ರಸ್ತೆಯಲ್ಲಿ ಜನ ಮತ್ತು ವಾಹನಗಳ ಓಡಾಟಕ್ಕೆ ತೀವ್ರ ಅಡಚಣೆಯಾಗಿದೆ.

    ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು, ಮಳೆ ಬಂದಾಗ ಈ ಪ್ರದೇಶಗಳಲ್ಲಿ ನೀರು ನಿಲ್ಲುವುದರಿಂದ ರಸ್ತೆ ಮುಚ್ಚಿಹೋಗುತ್ತದೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಮತ್ತು ಇತರ ವಾಹನ ಚಾಲಕರು ಅಪಘಾತಗಳಿಗೆ ಗುರಿಯಾಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಎರಡೂ ಕಡೆಗಳಲ್ಲೂ ಅನೇಕ ಅಪಘಾತ ನಡೆದಿದ್ದು, ಜನರು ಗಂಭೀರ ಗಾಯಗೊಂಡಿದ್ದಾರೆ.

    ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬಿಳೇಕಲ್ಲಹಳ್ಳಿ, ಕರಿಚಿಕ್ಕನಹಳ್ಳಿ ಬಳಿ ರಸ್ತೆ ತೀವ್ರ ಹದಗೆಟ್ಟ ಪರಿಣಾಮ ರಾತ್ರಿ ಸಮಯದಲ್ಲಿ ರಸ್ತೆ ಗುಂಡಿ ಕಾಣದೆ ವಾಹನ ಅಪಘಾತಕ್ಕೀಡಾದ ನಿದರ್ಶನಗಳಿವೆ.

    ತೊಂಡೇಬಾವಿಯಲ್ಲಿರುವ ಸಿಮೆಂಟ್‌ ಕಾರ್ಖಾನೆಯಿಂದ ಬರುವ ಭಾರೀ ಲಾರಿಗಳು ನಿಯಮ ಮೀರಿ ಈ ರಸ್ತೆಗಳಲ್ಲಿ ಸಂಚರಿಸುವುದರಿಂದ, ಕೆಲವೇ ವರ್ಷಗಳಲ್ಲಿ ರಸ್ತೆಗಳು ಹಾಳಾಗಿವೆ. ರಸ್ತೆ ಗುಣಮಟ್ಟ ಕಳಪೆಯಿದ್ದು, ಭಾರಿ ವಾಹನಗಳ ಒತ್ತಡದಿಂದ ರಸ್ತೆಗಳು ಬೇಗನೆ ಹಾಳಾಗುತ್ತಿವೆ ಎಂದು  ಇಲ್ಲಿನ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೊರಟಗೆರೆ-ಮಧುಗಿರಿ ರಾಷ್ಟ್ರೀಯ ಹೆದ್ದಾರಿಯ ತುಂಬಾಡಿ ಬಳಿಯ ಟೋಲ್ ಬಳಿ ರಸ್ತೆ ಸಹ ತೀವ್ರ ಹಾಳಾಗಿದೆ. ಟೋಲ್ ತೆರವು ಮಾಡಿದ ನಂತರ ಅಲ್ಲಿ ಇದ್ದ ಪರಿಕರಗಳನ್ನು ಸ್ಥಳಾಂತರಿಸುವಾಗ ಅಗೆದ ರಸ್ತೆಯನ್ನು ಪುನಃ ನಿರ್ಮಿಸದೇ ಹಾಗೆಯೇ ಬಿಡಲಾಗಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಅನೇಕ ರಸ್ತೆ ಅಪಘಾತಗಳು ಸಂಭವಿಸುತ್ತಿವೆ.

    ತಾಲ್ಲೂಕಿನ ಹೃದಯ ಭಾಗ ಹಾಗೂ ಆಡಳಿತ ಕೇಂದ್ರವಾದ ತಾಲ್ಲೂಕು ಕಚೇರಿ ಮುಂಭಾಗದ ಮಧುಗಿರಿ–ಕೊರಟಗೆರೆ ಮುಖ್ಯರಸ್ತೆಯಲ್ಲೆ ರಸ್ತೆ ತೀವ್ರ ಹಾಳಾಗಿದೆ. ಜೊತೆಗೆ ಪಟ್ಟಣದ ಹೊರವಲಯದ ಹುಲಿಕುಂಟೆ ಬೈಪಾಸ್‌ ಬಳಿ ರಸ್ತೆ ಮಧ್ಯೆ ದೊಡ್ಡ ಗುಂಡಿ ಬಿದ್ದಿದ್ದು, ನೀರಿನ ಹೊಂಡದಂತಾಗಿದೆ. ಇದರಿಂದ ರಸ್ತೆ ಸರಿಯಾಗಿ ಕಾಣದ ಅಪಘಾತಗಳು ಉಂಟಾಗುತ್ತಿವೆ. ತಾಲ್ಲೂಕು ಕಚೇರಿ ಹಿಂಭಾಗದ ವಸತಿ ಕೇಂದ್ರ, ಪೊಲೀಸ್ ಠಾಣೆ ಸೇರಿದಂತೆ ಇತರೆ ಕಚೇರಿಗಳಿಗೆ ಹೋಗುವ ರಸ್ತೆಗಳು 90ರ ದಶಕದಲ್ಲಿ ನಿರ್ಮಾಣ ಮಾಡಲಾಗಿದೆ. ತದನಂತರ ಅವುಗಳನ್ನ ಅಭಿವೃದ್ಧಿಪಡಿಸಿಲ್ಲ. ಇದರಿಂದ ತಾಲ್ಲೂಕು ಕಚೇರಿ ಪಕ್ಕದ ಕೃಷಿ ಇಲಾಖೆ, ವಸತಿ ಸಮುಚ್ಛಯಗಳಿಗೆ ಹೋಗುವ ರಸ್ತೆ ಹೊಂಡ ಬಿದ್ದು ಕೆಸರಿನ ಗದ್ದೆಯಾಗಿವೆ ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು, ಗೃಹ ಸಚಿವರೂ ಆಗಿರುವ ಕ್ಷೇತ್ರದ ಶಾಸಕರು ಈ ಬಗ್ಗೆ ಗಮನ ಹರಿಸುತ್ತಾರಾ ಎಂದು ಕಾದುನೋಡಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.