ಬೆಳಗಾವಿ: ಸಾಲ ಮರುಪಾವತಿಸದ ಹಿನ್ನೆಲೆ ಬಾಣಂತಿ ಸಹಿತ ಕುಟುಂಬದವರನ್ನು ಹೊರ ಹಾಕಿದ ಘಟನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯ ಬೀಗ ತೆರವುಗೊಳಿಸಿ ಕುಟುಂಬಸ್ಥರನ್ನು ಮನೆಗೆ ಸೇರಿಸಿದ್ದಾರೆ.
ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಮಾಧುರಿ ಲೋಹಾರ್ ಎನ್ನುವ ಬಾಣಂತಿ ಮತ್ತು ಅವರ ಕುಟುಂಬದವರು ಸಾಲ ತೀರಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಹಣಕಾಸು ಸಂಸ್ಥೆ, ಮನೆಯನ್ನು ಸೀಝ್ ಮಾಡಿತ್ತು.
ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸುದ್ದಿ ತಿಳಿದು, ತಮ್ಮ ಆಪ್ತ ಸಹಾಯಕರನ್ನು ಸ್ಥಳಕ್ಕೆ ಕಳಿಸಿ ಕುಟುಂಬಕ್ಕೆ ಆಹಾರ, ಧಾನ್ಯಗಳನ್ನು ಮತ್ತು ಸ್ವಲ್ಪಮಟ್ಟಿಗೆ ಆರ್ಥಿಕ ನೆರವನ್ನು ಒದಗಿಸಿದರು. ನಂತರ ಹಣಕಾಸು ಸಂಸ್ಥೆಯ ಪ್ರತಿನಿಧಿಗಳ ಜೊತೆ ಮಾತನಾಡಿ, ಸಾಲ ಮರುಪಾವತಿಸಲು ಸಮಯಾವಕಾಶ ಕೊಡಿಸಿದ್ದಲ್ಲದೆ, ಮನೆಯ ಬೀಗ ತೆರವು ಮಾಡಿಸಿ ಕುಟುಂಬಸ್ಥರನ್ನು ಮನೆಗೆ ಸೇರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx