nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿರ್ಗತಿಕ ಕುಟುಂಬಕ್ಕೆ ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ November 27, 2024

    ನಿರ್ಗತಿಕ ಕುಟುಂಬಕ್ಕೆ ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್

    By adminNovember 27, 2024No Comments2 Mins Read
    lakshmi hebbalkar

    ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ ಮೂಲಕ ಮಾನವೀಯತೆ ತೋರಿಸಿದ್ದಾರೆ.

    ಕಾರ್ಯಕ್ರಮ ಮುಗಿಸಿ ಮರಳುವಾಗ ವಿಜಯಪುರ — ಬಾಗಲಕೋಟೆ ಹೆದ್ದಾರಿಯ ಪಕ್ಕ ಹನಗನಹಳ್ಳಿ ಎಂಬಲ್ಲಿ ರಸ್ತೆ ಪಕ್ಕದಲ್ಲಿ ಊಟಕ್ಕೆಂದು ಸಚಿವರು ವಾಹನ ನಿಲ್ಲಿಸಿದರು. ಊಟ ಮಾಡುವಾಗ ಪಕ್ಕದಲ್ಲಿದ್ದ ಸಣ್ಣ ಮನೆಯ ಮುಂದೆ ಅಜ್ಜಿಯೊಬ್ಬಳು ಬಾಟಲಿಗಳಲ್ಲಿ ನೀರು ತುಂಬಿಸಿ ಮನೆಯ ಮುಂದೆ ಇಡುತ್ತಿದ್ದಳು. ಆ ಬಗ್ಗೆ ವಿಚಾರಿಸಿದಾಗ ರಸ್ತೆಯಲ್ಲಿ ಹೋಗುವ ಜನರು ನೀರು ಕುಡಿಯಲು ಬರುತ್ತಾರೆ. ಅವರಿಗೆ ಸಹಾಯವಾಗಲೆಂದು ಬಾಟಲಿಗಳಲ್ಲಿ ತುಂಬಿ ಇಡುವುದಾಗಿ ತಿಳಿಸಿದಳು.


    Provided by
    Provided by

    ಹಾಗೆ ಮಾತನಾಡುತ್ತ ಗೌರಮ್ಮ ವಾಡೇದ ಎಂಬ ಆ ಅಜ್ಜಿ ಹಾಗೂ ಜೊತೆಗಿದ್ದ  ಮಲ್ಲು ಎನ್ನುವ ಹೆಸರಿನ ಅವಳ ಮಗನ ಕುರಿತು ವಿಚಾರಿಸಿದಾಗ, ಅವರು ಹಳ್ಳಿಯಲ್ಲಿ ಹೊಂದಿದ್ದ ಮನೆಯ ಜಾಗ ರಸ್ತೆ ಮಾಡುವಾಗ ಕೈ ತಪ್ಪಿದೆ. ಇದರಿಂದಾಗಿ ವಾಸಿಸಲು ಮನೆಯೇ ಇರಲಿಲ್ಲ. ನಂತರ ಈ ಸ್ಥಳದಲ್ಲಿದ್ದ ತೋಟದ ಮಾಲಕರು ಒಂದೇ ಕೊಠಡಿಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿದರು. ಆದರೆ ಅಡುಗೆ ಮಾಡಲು ಪಾತ್ರೆಗಳಾಗಲಿ, ಹಾಸಿಗೆ- ಹೊದಿಕೆಗಳಾಗಲಿ, ಕಾಳು ಕಡಿಗಳಾಗಲಿ ಏನೂ ಇಲ್ಲದೆ ಊಟಕ್ಕೂ ಸರಿಯಾಗಿ ಗತಿ ಇಲ್ಲ ಎನ್ನುವ ಅಂಶ ಗೊತ್ತಾಯಿತು. ಅವರು ಈ ಮೊದಲು ಹೊಂದಿದ್ದ ಪಡಿತರ ಕಾರ್ಡ್ ಕೂಡ ಕಳೆದುಹೋಗಿದ್ದರಿಂದ ಸರಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎನ್ನುವುದು ಕೂಡ ತಿಳಿಯಿತು.

    ಕೂಡಲೇ ಸಚಿವರು ಸ್ವಲ್ಪಮಟ್ಟಿಗೆ ಆರ್ಥಿಕ ನೆರವು ನೀಡಿದರಲ್ಲದೆ, ಆದಷ್ಟು ಶೀಘ್ರ ರೇಶನ್ ಕಾರ್ಡ್ ಮತ್ತು ಗೃಹಲಕ್ಷ್ಮೀ ಯೋಜನೆಯ ಹಣ ಬರುವಂತೆ ಮಾಡುವುದಾಗಿ ತಿಳಿಸಿ, ಸ್ಥಳದಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ನೆರವು ನೀಡಿದ ಪೊಲೀಸ್ ಅಧಿಕಾರಿ:

    ಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ಎಎಸ್ಐ ಎಚ್.ಎಸ್.ಗೌಡರ್ ಸಚಿವರ ಬಳಿ ಆಗಮಿಸಿ, ಅಜ್ಜಿಯ ಕುಟುಂಬದ ಪರಿಸ್ಥಿತಿ ವಿವರಿಸಿದರು. ಆಗ ಅಜ್ಜಿ, ತಾವು ಉಪವಾಸವಿದ್ದ ಸಂದರ್ಭದಲ್ಲಿ ಎಎಸ್ ಐ ತಮಗೆ ಅಕ್ಕಿ ನೀಡಿ ನೆರವು ನೀಡಿದ್ದಾರೆ ಎಂದು ಸಚಿವರಿಗೆ ತಿಳಿಸಿದಳು. ಇದನ್ನು ತಿಳಿದ ಸಚಿವರು, ಸಂಕಷ್ಟದಲ್ಲಿದ್ದವರಿಗೆ ನೆರವು ನೀಡಿದ್ದಕ್ಕಾಗಿ ಸರಕಾರದ ಪರವಾಗಿ ಎಎಸ್ ಐ ಗೌಡರ್ ಗೆ ಧನ್ಯವಾದ ತಿಳಿಸಿದರು.

    ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇಂತವರಿಗಾಗಿಯೇ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳು ಬಡವರಿಗಾಗಿಯೇ ಯೋಜನೆಗಳನ್ನು ತಂದಿದ್ದಾರೆ. ಅದು ಯಾರಿಗೆ ತಲುಪಿಲ್ಲವೋ ಅಂತವರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡಲಾಗುವುದು. ಎಎಸ್ಐ ಗೌಡರ್ ಮನುಷ್ಯತ್ವ ತೋರಿಸಿ ಅಜ್ಜಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ. ಅವರ ಕಾರ್ಯ ಸ್ತುತ್ಯಾರ್ಹ. ಸರಕಾರದಿಂದ ಆ ಕುಟುಂಬಕ್ಕೆ ಎಲ್ಲ ನೆರವು ಸಿಗುವಂತೆ ಮಾಡುತ್ತೇನೆ ಎಂದು ತಿಳಿಸಿದರು.

    ತಮ್ಮ ಅವಸರದ ಪ್ರವಾಸದ ಮಧ್ಯೆಯೂ ಸಚಿವರು ಸಮಯ ನೀಡಿ ಇಂತಹ ನಿರ್ಗತಿಕ ಕುಟುಂಬಕ್ಕೆ ನೆರವು ನೀಡಲು ಮುಂದಾಗಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.