ತಿ.ನರಸೀಪುರ: ಇಲ್ಲಿನ ತಲಕಾಡು ಪೋಲೀಸ್ ಠಾಣೆಯ ಪಿಎಸ್ಐ ಸಿದ್ದಯ್ಯ ಹಾಗೂ ಮುಖ್ಯಪೇದೆ ಸತೀಶ್ ಕುಮಾರ್ ಎಸಿಬಿ ಬಲೆಗೆ ಬಿದ್ದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ರಾಜಿ ಸಂಧಾನ ವಿಚಾರವಾಗಿ 7, 500ರೂ.ಗಳ ಲಂಚಕ್ಕೆ ಪಿಎಸ್ ಐ ಸಿದ್ದಯ್ಯ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಈ ಸಂಬಂಧ ದೂರುದಾರ ಅಶೋಕ್ ಕುಮಾರ್ ಎಸಿಬಿಗೆ ದೂರು ನೀಡಿದ್ದರೆನ್ನಲಾಗಿದೆ.
ಈ ಭ್ರಷ್ಟಾಚಾರದಲ್ಲಿ ಮುಖ್ಯಪೇದೆ ಸತೀಶ್ ಕುಮಾರ್ ಕೂಡ ಭಾಗಿಯಾಗಿದ್ದು, ಇವರಿಬ್ಬರನ್ನೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB