ಬೆಂಗಳೂರು : ರಾಜ್ಯದಲ್ಲಿ ಲಂಚ ತಿಂದರೆ ಅಪರಾಧ ಅಲ್ಲ. ಲಂಚ ತಿಂದಿದ್ದನ್ನು ಹೇಳಿದರೆ ಅಪರಾಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರ ಬಂಧನ ಖಂಡಿಸಿ ಟ್ವೀಟ್ ಮಾಡಿದ್ದಾರೆ.
ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಜನರನ್ನ ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲುಕಟ್ಟಿಸ್ತಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನ ಬಂಡೆದಿದ್ದಾರೆ, ಎಚ್ಚರ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ. ಅದರ ಬಗ್ಗೆ ಸಿಎಂ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ. ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರವಾಗಿದೆ ಎಂದು ಹೇಳಿದರು.
ರಾಜಕೀಯ ವ್ಯವಸ್ಥೆಯಲ್ಲಿ ಆರೋಪ-ಪ್ರತ್ಯಾರೋಪ ಸಹಜ. ಇದನ್ನು ಕೀಳುಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತೆ. ಮುಖ್ಯಮಂತ್ರಿಗಳೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿದ್ರಿ. ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ ಎಂದು ಟ್ವಿಟರ್ನಲ್ಲಿ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy