ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರನ್ನು ಬಂಧಿಸಿರುವ ಹಿನ್ನೆಲೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 17 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿರುವವರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶದ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೋರಾಟಗಾರರನ್ನು ಜಿಲ್ಲಾಡಳಿತ ಪೊಲೀಸರನ್ನು ಬಿಟ್ಟು ಬಂಧಿಸಿದೆ, ಹಲವು ಅನುಮತಿ ಪಡೆಯುವಂತೆ ಆದೇಶ ಮಾಡಿ ಹೋರಾಟಗಾರರನ್ನು ಬಂಧಿಸಲಾಗಿದೆ. ಇದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ದಬ್ಬಾಳಿಕೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಸಮಸ್ಯೆಗೆ ಸಚಿವರು, ಜಿಲ್ಲಾಧಿಕಾರಿಗಳು ಈವರೆಗೆ ಹಲವು ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಇದರ ವಿರುದ್ಧ ಹೋರಾಟ ಮಾಡ್ತಾ ಇದ್ದೋರನ್ನ ಬಂಧಿಸಿ ಹೋರಾಟ ಮಾಡುವಂತಿಲ್ಲ ಎನ್ನುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡೋದು ನಮ್ಮ ಹಕ್ಕು. ಜಿಲ್ಲಾಧಿಕಾರಿಯವರು ನೇರಾ ನೇರ ಮಾತುಕತೆ ನಡೆಸಿ ಇತ್ಯರ್ಥ ಮಾಡುವಂತೆ ಒತ್ತಾಯಿಸುತ್ತೇವೆ, ನಾವು ಯಾವುದೇ ತೊಂದರೆ ಕೊಡುದಿಲ್ಲ ನಮಗೆ ಹೋರಾಟ ಮಾಡಲು ಬಿಡಿ ಎಂದು ಹೋರಾಟಗಾರರು ಒತ್ತಾಯ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ತಿಪಟೂರು ಕೃಷ್ಣ, ನಾಗರಾಜು ಸಿರಿಮನೆ, ರಮೇಶ್ ಸಂಕ್ರಾಂತಿ, ಕುಮಾರ್ ಸಮತಳ, ಶ್ರೀರಂಗಾಚಾರ್ಯ ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW