nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    ಪಾವಗಡ May 3, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    By adminMay 3, 2026No Comments2 Mins Read
    pavagada

    ಪಾವಗಡ: ತಾಲ್ಲೂಕಿನಲ್ಲಿ ದೊಡ್ಡಮಟ್ಟದಲ್ಲಿ ಭೂಮಾಫಿಯಾ ದಂಧೆ ನಡೆಯುತ್ತಿದೆ ಎಂದು ಶ್ರೀ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಗೌಡೆಟಿ ಪ್ರಭಾಕರ್ ಗಂಭೀರ ಆರೋಪ ಮಾಡಿದರು. ಅವರು ಪಟ್ಟಣದ ಅಗ್ರಿಗೋಲ್ಡ್ ಲೇಔಟ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ತಹಶೀಲ್ದಾರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಯಾರದೋ ಜಮೀನು, ಯಾರಿಗೋ ಖಾತೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಕಸಬಾ ಹೋಬಳಿಯ ಕನಕಾಪುರ ಗ್ರಾಮದ ಸರ್ವೆ ನಂಬರ್ 152 ರಲ್ಲಿನ ಜಮೀನಿನ ವಿಷಯದಲ್ಲಿ ಕಂದಾಯ ಅಧಿಕಾರಿಗಳು ಬ್ರಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ. ಕರ್ನಾಟಕದ ಭೂಮಿಗೆ ಸಂಬಂಧಿಸಿದಂತೆ ಸ್ಥಳೀಯ ದಾಖಲೆಗಳನ್ನು ಪರಿಶೀಲಿಸುವ ಬದಲು, ಆಂಧ್ರಪ್ರದೇಶದ ವಂಶವೃಕ್ಷವನ್ನು ಆಧಾರವಾಗಿಟ್ಟುಕೊಂಡು ಅಕ್ರಮವಾಗಿ ಬೇರೆಯವರ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ್ ಅವರು ನಿಯಮಗಳನ್ನು ಗಾಳಿಗೆ ತೂರಿ ಈ ಕೆಲಸ ಮಾಡಿದ್ದಾರೆ. ಅಧಿಕಾರಿಗಳಿಗೆ ಹಣ ಕೊಟ್ಟರೆ ಸಾಕು, ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದರು.

    ಜಮೀನು ಖಾತೆ ಬದಲಾವಣೆ ಮಾಡಬೇಕಾದರೆ ಅಧಿಕಾರಿಗಳು ಸರ್ಕಾರದ ನಿಯಮಾವಳಿಗಳ ಅನುಸಾರವಾಗಿ ಮಾಡಬೇಕಾಗಿದೆ. ಇವೆಲ್ಲವನ್ನು ಗಾಳಿಗೆ ತೂರಿದ ಅಧಿಕಾರಿಗಳು ಯಾರದೋ ವಂಶವೃಕ್ಷ ಯಾರಿಗೋ ಖಾತೆ ಎಂಬಂತೆ ಮಾಡುತ್ತಿದ್ದಾರೆ. ಇಂಥ ವ್ಯವಸ್ಥೆ ಇಲ್ಲಿದ್ದು, ತಾಲೂಕಿನಲ್ಲಿ ಕಾನೂನು ವ್ಯವಸ್ಥೆ ಕೆಟ್ಟು ನಿಂತಿದೆ. ಇದನ್ನು ತಕ್ಷಣವೇ ತನಿಖೆ ಕೈಗೊಂಡು ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

    ಈ ಹಗರಣ ಕುರಿತು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನಮ್ಮ ದೂರಿನ ಮೇರೆಗೆ ಜಿಲ್ಲಾಧಿಕಾರಿಗಳು ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿಗಳಿಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ಆದರೆ, ಉಪವಿಭಾಗಾಧಿಕಾರಿಗಳು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಸಹ ಕೇವಲ ಪತ್ರ ವ್ಯವಹಾರಕ್ಕೆ ಸೀಮಿತವಾಗಿರುವುದು ಅವರ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.

    ಕೂಡಲೇ ಅಕ್ರಮವಾಗಿ ಮಾಡಲಾಗಿರುವ ಖಾತೆಯನ್ನು ರದ್ದುಗೊಳಿಸಬೇಕು ಮತ್ತು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ತಾಲ್ಲೂಕು ಆಡಳಿತ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಧರ್ಮಪಾಲ್, ಮಾದಿಗ ದಂಡೋರ ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ, ಹನುಮಂತರಾಯಪ್ಪ, ರವಿ, ನರಸಿಂಹಮೂರ್ತಿ, ನರಸಿಂಹ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.