ಹಾಸನ: ಸತತ ಮಳೆಯಿಂದ ಹಾಸನದ ಶಿರಾಡಿ ಘಾಟಿಯಲ್ಲಿ ರಸ್ತೆಯ ಮೇಲೆ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡಿದ್ದು.ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ರದ್ದುಗೊಳಿಸಲಾಗಿದೆ.
ಭೂಕುಸಿತದಲ್ಲಿ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ ವಾಹನಗಳಲ್ಲಿ ಇದ್ದವರನ್ನು ರಕ್ಷಿಸಲಾಗಿದೆ.
ಇನ್ನು ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸಿಬ್ಬಂದಿಗಳು ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದು ಸ್ಥಳದಲ್ಲಿ ಮತ್ತಷ್ಟು ಮಣ್ಣು ಕುಸಿಯುವ ಆತಂಕ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA