63 ಜನರನ್ನು ಸಾಗಿಸುತ್ತಿದ್ದ ಎರಡು ಬಸ್ ಗಳು ಭೂ ಕುಸಿತ ಉಂಟಾದ ಪರಿಣಾಮ, ಉಕ್ಕಿ ಹರಿಯುತ್ತಿದ್ದ ನದಿಗೆ ಬಿದ್ದು, ಬಸ್ ನಲ್ಲಿ ಇದ್ದವರೆಲ್ಲ ಕಣ್ಮರೆಯಾಗಿರುವ ಆಘಾತಕಾರಿ ಘಟನೆಯೊಂದು ನೇಪಾಳದಲ್ಲಿ ನಡೆದಿದೆ.
ನೇಪಾಳದ ಮದನ್–ಆಶ್ರಿತ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ಈ ಭಯಾನಕ ಘಟನೆ ನಡೆದಿದೆ. ಕಠ್ಮಂಡುವಿನಿಂದ ಹೊರಟಿದ್ದ ಏಂಜೆಲ್ ಬಸ್ ಮತ್ತು ಗಣಪತಿ ಡಿಲಕ್ಸ್ ಬಸ್ ನಲ್ಲಿ 63 ಮಂದಿ ಇದ್ದರು. ಭಾರೀ ಮಳೆಯ ಕಾರಣ ಇಂದು ಮುಂಜಾನೆ 3:30 ರ ಸುಮಾರಿಗೆ ಭೂಕುಸಿತ ಉಂಟಾಗಿದೆ ಎನ್ನಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಎರಡೂ ಬಸ್ ಗಳಲ್ಲಿ ಬಸ್ ಚಾಲಕರು ಸೇರಿ 63 ಮಂದಿ ಪ್ರಯಾಣ ಮಾಡುತ್ತಿದ್ದು, ಮುಂಜಾನೆ 3:30 ರ ಸುಮಾರಿಗೆ ಭೂಕುಸಿತ ಉಂಟಾಗಿ ಈ ಭಾರೀ ಅವಘಡ ಸಂಭವಿಸಿದೆ. ಬಸ್ ಹುಡುಕುವ ಪ್ರಯತ್ನ ನಡೆಯುತ್ತಿದೆ, ರಕ್ಷಣಾ ಕಾರ್ಯ ಮುಂದುವರಿದಿದೆ. ಆದರೆ ನಿರಂತರ ಸುರಿಯುತ್ತಿರುವ ಮಳೆಯು ಅಡ್ಡಿಪಡಿಸುತ್ತಿದೆ ಎಂದು ಹೇಳಲಾಗಿದೆ.
ಪ್ರಯಾಣಿಕರನ್ನು ಹುಡುಕಲು ಮತ್ತು ಕೂಡಲೇ ರಕ್ಷಿಸಲು ಗೃಹ ಆಡಳಿತ ಸೇರಿ ಸರಕಾರದ ಎಲ್ಲಾ ಏಜೆನ್ಸಿಗಳಿಗೆ ನಿರ್ದೇಶನ ನೀಡಿರುವುದಾಗಿ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA