ತುಮಕೂರು: ಕೋವಿಡ್ ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಪ್ರವೇಶ ನೀಡಬಾರದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಲಸಿಕೆ ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ ಸೋಮವಾರ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಮಾತನಾಡಿದ ಅವರು, ವಿದ್ಯಾರ್ಥಿಗಳು ಕನಿಷ್ಠ ಒಂದು ಡೋಸ್ ಪಡೆಯದಿದ್ದರೆ ಪ್ರವೇಶ ನೀಡುವಂತಿಲ್ಲ. ವಿದ್ಯಾರ್ಥಿಗಳು ಲಸಿಕೆ ಪಡೆಯದೆ ಕಾಲೇಜುಗಳಲ್ಲಿ ಕೋವಿಡ್ ಹೆಚ್ಚಳವಾದರೆ ಸಂಬಂಧಿಸಿದ ಪ್ರಾಚಾರ್ಯರು, ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ಎಂದು ಎಚ್ಚರಿಕೆ ನೀಡಿದರು.
ವಿವಿಧೆಡೆ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಕಳೆದ ಒಂದು ತಿಂಗಳ ಹಿಂದೆ ಜಿಲ್ಲೆಗೆ ಬಂದಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಸೋಂಕು ಹರಡುವುದನ್ನು ತಡೆಯಲು ಪದವಿ, ಎಂಜಿನಿಯರಿಂಗ್, ನರ್ಸಿಂಗ್ ಕಾಲೇಜುಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಸೋಂಕು ಹೆಚ್ಚಳವಾದ ಕಡೆ ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700