ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆರೋಗ್ಯ ಸುರಕ್ಷಿತೆಗಾಗಿ ಕೋವಿಡ್ ಲಸಿಕೆಯನ್ನು ಪಡೆಯುವ ಜೊತೆಗೆ ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಮೌಳಿ ಹೇಳಿದರು.
ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಹಾಗೂ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಸಿಬ್ಬಂದಿವರ್ಗದ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ಚಂದ್ರಮೌಳಿ, ಸುರಕ್ಷಾ ಅಧಿಕಾರಿಗಳಾದ ಮೋಹನ್, ಶೀಲ, ನಿರೀಕ್ಷಣ ಅಧಿಕಾರಿ ಚಂದ್ರಶೇಖರ್, ವಿವೇಕ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.