nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    ಕೊರಟಗೆರೆ June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    By adminJune 22, 2026No Comments2 Mins Read
    koratagere.jpg

    ಕೊರಟಗೆರೆ: ಮನುಷ್ಯನ ಬದುಕಿಗೆ ಧರ್ಮ ಪರಿಪಾಲನೆ ಬಹುಮುಖ್ಯ ಎಂದು ಬಾಳೇಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

    ಅವರು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದ ಶ್ರೀಬಾಳೇಹೊನ್ನೂರು ಖಾಸಾ ಶಾಖಾ ಮಠದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 20ನೆ ವಾರ್ಷಿಕೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರ ಜನರ ನಿಜವಾದ ಆಸ್ತಿ. ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ ಎಂದು ಕರೆ ಕೊಟ್ಟರು.

    ಸಿದ್ದರಬೆಟ್ಟ ಶ್ರೀಬಾಳೇಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಸಮಾಜದಲ್ಲಿ ಸಾಮೂಹಿಕ ವಿವಾಹವು ವಿಶೇಷ ಪಾತ್ರ ವಹಿಸಿದೆ. ಸಿದ್ದರಬೆಟ್ಟ ಶ್ರೀಮಠಕ್ಕೆ ಭಕ್ತ ಸಮೂಹವೇ ಶ್ರೀರಕ್ಷೆ ಎಂದು ಹೇಳಿದರು.

    ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಸಿದ್ದರಬೆಟ್ಟ ಶ್ರೀಮಠದ 20ನೆ ವಾರ್ಷಿಕೋತ್ಸವ ಕಾರ್ಯಕ್ರಮ ಇತಿಹಾಸದ ಪುಟ ಸೇರಿದೆ. ಶ್ರೀ ಕ್ಷೇತ್ರದ ಪ್ರತಿಯೊಬ್ಬ ಸಹ ಷೇಧಧಿ ಗುಣ ಹೊಂದಿದೆ ಎಂದು ಹೇಳಿದರು.
    ವೇದಿಕೆಯಲ್ಲಿ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಪೀಠಾಧ್ಯಕ್ಷರು, ಮಾಲಿಮಠ, ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ, ತಂಗನಹಳ್ಳಿಯ ಬಸವಮಾಲಿಂಗ, ಚಿಕ್ಕತೊಟ್ಲುಕೆರೆಯ ಮಲ್ಲಿಕಾರ್ಜುನ ಸ್ವಾಮೀಜಿ, ತೆಗ್ಗಿಹಾಳ್ಳಿಯ ರಮಾನಂದ ಸ್ವಾಮಿ, ತಮ್ಮ ಡಿಹಳ್ಳಿಯ ಸಿದ್ಧಲಿಂಗ ದೇಶಿಕೇಂದ್ರ ಸ್ವಾಮಿ, ಚಿಮ್ಮಲಗಿಯ ಸಿದ್ಧರೇಣುಕ ಶಿವಾಚಾರ್ಯ, ತಾವರೆಹಳ್ಳಿಯ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ, ಸೂಪದ ಸೋಮೇಶ್ವರ ಶಿವಾಚಾರ್ಯ, ಸಂಗೊಳ್ಳಿಯ ಗುರುಲಿಂಗ ಶಿವಾಚಾರ್ಯ, ಹೊಸವನಹಳ್ಳಿಯ ನಂಜುಂಡೇಶ್ವರ ಒಡೆಯರ್, ನಾಗವಂದದ ಶಿವಯೋಗಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು.

    ಸಮಾರಂಭದಲ್ಲಿ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ, ಪಿ.ಎನ್.ಕೃಷ್ಣಮೂರ್ತಿ, ಮಹಾಲಿಂಗಪ್ಪ ಹೆಚ್.ಕೆ., ಅಖಿಲ ಭಾರತ ವೀರಶೈವ ಲಿಂಗಾಯತ ಜಿಲ್ಲಾ ಯುವಾಧ್ಯಕ್ಷ ಡಾ.ಕೆ.ಎಲ್.ದರ್ಶನ್, ಕೊರಟಗೆರೆ ಅಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಶಿವಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ದಯಾಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೇರೆಶಂಕರ್, ಜೆಡಿಎಸ್ ಅಧ್ಯಕ್ಷ ಕಾಮರಾಜು, ಮುಖಂಡರಾದ ಕೃಷ್ಣಪ್ಪ, ಬಲರಾಮಯ್ಯ, ರಾಮಮೂರ್ತಿ, ರುದ್ರಮುನಿ, ವಿನಯ್, ಗಿರೀಶ್ ಇತರರು ಇದ್ದರು.
    ಗಮನ ಸೆಳೆದ ಪುಸ್ತಕ ದಾಸೋಹ ಸಿದ್ದರಬೆಟ್ಟ ಶ್ರೀಮಠದಿಂದ ಭಕ್ತರಿಗಾಗಿಯೇ ವಿಶೇಷವಾಗಿ 10 ಸಾವಿರ ಪುಸ್ತಕ ದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಒಬ್ಬ ಭಕ್ತ 1 ಪುಸ್ತಕ ತಂದರೆ 2 ಪುಸ್ತಕ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿತ್ತು. ಇದೇ ವೇಳೆ ಪರಿಸರ ರಕ್ಷಣೆಗಾಗಿ ಶ್ರೀಮಠದಿಂದ ಭಕ್ತರಿಗೆ 5 ಸಾವಿರ ಗಿಡಗಳನ್ನು ಉಚಿತವಾಗಿ ವಿತರಿಸಲಾಯಿತು.

    20 ಉಚಿತ ಸಾಮೂಹಿಕ ವಿವಾಹ

    ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ 20 ಯುವ ಜೋಡಿಗಳಿಗೆ ಶ್ರೀಗಳ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನಡೆಯಿತು. ಶ್ರೀಮಠದ 20 ಭಕ್ತರಿಗೆ ವಿಶೇಷ ಗುರುರಕ್ಷೆ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಶ್ರೀ ವೀರೇಂದ್ರ ಹೆಗ್ಗಡೆ ಅವರು ಅನಾರೋಗ್ಯದ ಪ್ರಯುಕ್ತ ಸಮಾರಂಭಕ್ಕೆ ಗೈರಾದ ಹಿನ್ನೆಲೆ ಧರ್ಮಸ್ಥಳಕ್ಕೆ ತೆರಳಿ ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮಾಡುವುದಾಗಿ ಶ್ರೀಗಳು ತಿಳಿಸಿದರು.

    ಸಿದ್ದರಬೆಟ್ಟ ಶ್ರೀಗಳು ಶ್ರೀಮಠ ಕಟ್ಟುವ ಬದಲಾಗಿ ಭಕ್ತರ ಮನಸ್ಸು ಕಟ್ಟಿದ್ದಾರೆ. ಸಿದ್ದರಬೆಟ್ಟ ಶ್ರೀಮಠವು 20 ವರ್ಷದ ಅವಧಿಯಲ್ಲಿ ಜಾತಿಭೇದ ಮತ್ತು ವರ್ಣಭೇದ ಇಲ್ಲದೇ ರಾಷ್ಟ್ರ ಮಟ್ಟಕ್ಕೆ ಬೆಳೆದಿದೆ. ಶ್ರೀಕ್ಷೇತ್ರದಲ್ಲಿ 108 ಅಡಿ ಎತ್ತರದ ಶಿವಲಿಂಗ ಸ್ಥಾಪನೆಗೆ ಭಕ್ತರ ಸಹಕಾರ ಅತ್ಯಗತ್ಯ.

    -ಡಾ.ಹನುಮಂತನಾಥ ಸ್ವಾಮೀಜಿ, ಪೀಠಾಧ್ಯಕ್ಷರು, ಎಲೆರಾಂಪುರ ಶ್ರೀಕ್ಷೇತ್ರ.

    ಬಾಳೇಹೊನ್ನೂರು ಜಗದ್ಗುರುಗಳ ಆಶೀರ್ವಾದ ಮತ್ತು ಶ್ರೀರಕ್ಷೆಯೇ ಸಿದ್ದರಬೆಟ್ಟ ಕ್ಷೇತ್ರವು ಬೆಳೆಯಲು ಕಾರಣ. ಸ್ವಾಮೀಜಿಗಳ ಹತ್ತಾರು ಸಮಾಜಸೇವೆ ಕಾರ್ಯಕ್ರಮಗಳೇ ಇವತ್ತಿನ ಭಕ್ತಸಾಗರಕ್ಕೆ ಸಾಕ್ಷಿ. ಮೊಬೈಲ್ ಕಡಿತ ಮಾಡಲು ಪುಸ್ತಕ ಮೆರವಣಿಗೆ ಕಾರ್ಯಕ್ರಮವೇ ಹೆಮ್ಮೆ.

    -ಶ್ರೀಕಾರದ ವೀರಬಸವ ಸ್ವಾಮೀಜಿ, ಪೀಠಾಧ್ಯಕ್ಷರು, ಬೆಳ್ಳಾವಿ.

    ಆಧುನಿಕತೆಯ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಮರೆಯಾಗಿದೆ. ಶ್ರೀ ವೀರಭದ್ರ ಶಿವಾಚಾರ್ಯರು 50 ವರ್ಷದ ಸಾಧನೆಯನ್ನು ಕೇವಲ 20 ವರ್ಷದಲ್ಲಿ ಮಾಡಿ ಭಕ್ತರ ಮನಸ್ಸಿನಲ್ಲಿ ನೆಲೆಸಿ ಕ್ರಿಯಾಶೀಲ ಬದುಕಿಗೆ ಸಾಕ್ಷಿಯಾಗಿದ್ದಾರೆ.

    -ಶ್ರೀರಂಭಾಪುರಿದಾ.ವೀರಸೋಮೇಶ್ವರ ಜಗದ್ಗುರುಗಳು, ಬಾಳೇಹೊನ್ನೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.