ಬೆಂಗಳೂರು: ನಗರದ ರಾಮೇಶ್ವರಂನಲ್ಲಿ ನಡೆದ ಬಾಂಬ್ ಸ್ಫೋಟವನ್ನು ಬಿಜೆಪಿಯವರು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ನಾವು ಕೂಡಾ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ 6 ಬಾಂಬ್ ಸ್ಫೋಟ ಪ್ರಕರಣಗಳನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.
ಬಿಜೆಪಿಯ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಈ ವಿಚಾರವನ್ನು ನಾವು ಜನರ ಮುಂದಿಡುತ್ತೇವೆ. ಪ್ರಪಂಚ ಇರುವವರೆಗೂ ಅಪರಾಧ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ ಎಂದರು.
ಬಿಜೆಪಿ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾವು ಬಂದ ಮೇಲೆ ಸುಧಾರಣೆಯಾಗಿದೆ. ಬಿಜೆಪಿಯವರು ಒಂದು ವರ್ಷದ ಅವಧಿಗೆ ಸಬ್ ಇನ್ಸ್ ಪೆಕ್ಟರ್, ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡುತ್ತಿದ್ದರು. ನಾವು 2 ವರ್ಷಗಳಿಗೊಮ್ಮೆ ಮಾಡುತ್ತಿದ್ದೇವೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


