ತುಮಕೂರು: ನಗರದ ಜಿಲ್ಲಾ ವಕೀಲರ ಸಂಘದಲ್ಲಿಇಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರು ವಕೀಲರ ದಿನಾಚರಣೆ ಪ್ರಯುಕ್ತ ವಕೀಲರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಇಂ ದು ಭಾರತದ ಪ್ರಥಮ ರಾಷ್ಟ್ರಪತಿ ಡಾ.ಬಾಬುರಾಜೇಂದ್ರ ಪ್ರಸಾದ್ ರವರ ಹುಟ್ಟುಹಬ್ಬದ ನಿಮಿತ್ತ ವಕೀಲರ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸುತ್ತಿದ್ದು, ವಕೀಲರು ದೇಶದ ಕಣ್ಣು ನೊಂದವರ ಕಣ್ಣೀರು ಒರೆಸಿ ನ್ಯಾಯಾಲಯದ ಮೂಲಕ ನ್ಯಾಯದಾನ ಒದಗಿಸುವಲ್ಲಿ ವಕೀಲರ ಪಾತ್ರ ಅತ್ಯಂತ ಹಿರಿದು, ಈ ನಿಟ್ಟಿನಲ್ಲಿ ವಕೀಲರು ಸದಾ ಒತ್ತಡದಲ್ಲಿರುತ್ತಾರೆ. ಅವರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು, ಆದ್ದರಿಂದ ಇಂದು ನಮ್ಮ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘ, ಶ್ರೀದೇವಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಕೀಲರು, ವಕೀಲರ ಕಚೇರಿಯ ಗುಮಾಸ್ತರುಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಿಗ್ಗಿನಿಂದ ಸಂಜೆವರೆಗೂ ಆಯೋಜಿಸಲಾಗಿದೆ, ಈ ಶಿಬಿರದಲ್ಲಿ ಬಿಪಿ, ಮಧುಮೇಹ, ಕಣ್ಣು, ಈಸಿಜಿ, ಚರ್ಮರೋಗ, ಉಚಿತ ರಕ್ತದಾನ ಶಿಬಿರ, ತಜ್ಞ ವೈದ್ಯರಿಂದ ಸೂಕ್ತ ಸಲಹೆಯನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿಎಲ್ಲರೂ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ, ಡಿ.ಸಿ.ಹಿಮಾನಂದ್, ನವೀನ್ ನಾಯಕ್, ಖಜಾಂಚಿ ಕು.ಭಾರತಿ, ಶಿವಲಿಂಗರಾಜು, ತಜ್ಞ ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx