ತುಮಕೂರು : ತಾಲೂಕಿನ ಹೊನ್ನೇನಹಳ್ಳಿಯಲ್ಲಿ ರೈಲ್ವೆಗೆ ಜಮೀನು ಸ್ವಾಧೀನಪಡಿಸಿಕೊಂಡಿರುವ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದ್ದಕ್ಕೆ ಸಿಪಿಐ ದಿನೇಶ್ ಕುಮಾರ್, ವಕೀಲ ರವಿಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತುಮಕೂರು ವಕೀಲರು ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಕೀಲ ರವಿಕುಮಾರ್ ಮೇಲೆ ಹಲ್ಲೆ ನಡೆಸಿರುವ ಸಿಪಿಐ ದಿನೇಶ್ ಕುಮಾರ್ ಅವರನ್ನು ಅಮಾನತ್ತುಪಡಿಸಬೇಕು ಎಂದು ಆಗ್ರಹಿಸಿದರು.
ವಕೀಲ ರವಿಕುಮಾರ್ ಮಾಧ್ಯಮಗಳ ಮುಂದೆ ಮಾತನಾಡಿ, ನಮ್ಮ ಭೂಮಿಯನ್ನು ಯಾವುದೇ ನೋಟೀಸ್ ನೀಡದೆ ವಶಪಡಿಸಿಕೊಂಡಿದೆ. ಇದನ್ನು ಅಧಿಕಾರಿಗಳಿಗೆ ಪ್ರಶ್ನಿಸಿದ್ದಕ್ಕೆ ಏಕಾಏಕಿ ಬಂದ ಸಿಪಿಐ ದಿನೇಶ್ ಕುಮಾರ್ ನನಗೆ ಹೊಡೆದರು ಬೂಟು ಗಾಲಿನಿಂದ ಒದ್ದರು. ಶರ್ಟ್ ಅನ್ನು ಹಿಡಿದು ಕೈದಿಗಳನ್ನು ಎಳೆದುಕೊಂಡು ಬಂದಂತೆ ಎಳೆದರು. ನಾನು ಏನೂ ಮಾಡಲಿಲ್ಲ. ಆದರೂ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು.
ವಕೀಲರು ಅಂತ ಗೊತ್ತಿದ್ದರೂ ನನ್ನ ಮೇಲೆ ಹೊಡೆದಿದ್ದಾರೆ, ಬಡಿದಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿರುವ ಸಿಪಿಐ ದಿನೇಶ್ ಕುಮಾರ್ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಎಸ್.ಪಿ.ಅಶೋಕ್ ಅವರನ್ನು ಸುತ್ತುವರೆದ ವಕೀಲರು ಸಿಪಿಐ ಅಮಾನತಿಗೆ ಪಟ್ಟುಹಿಡಿದರು.
ದಲಿತ ಸಂಘಟನೆಗಳಿಂದ ಪ್ರತಿಭಟನೆ:
ಸಿಪಿಐ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಕೀಲರು ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ನಗರ ಠಾಣೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ದಲಿತ ಪೇದೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.
ಕೆಂಪುಪಟ್ಟಿ ಧರಿಸಿ ಕೋರ್ಟ್ ಕಲಾಪದಲ್ಲಿ ಭಾಗಿ:
ದಿನೇಶ್ ಕುಮಾರ್ ವಿರುದ್ಧ ಎಫ್ ಐಆರ್ಗ ದಾಖಲಿಸುವವರೆಗೆ ಕೋರ್ಟ್ ಕಲಾಪವನ್ನು ಬಹಿಷ್ಕರಿಸಲು ನಿರ್ಧರಿಸಿದ್ದ ವಕೀಲರು ಕೆಂಪುಪಟ್ಟಿ ಧರಿಸಿ ಕಲಾಪದಲ್ಲಿ ಭಾಗಿಯಾಗಲು ನಿರ್ಧರಿಸಿದ್ದು ಐದು ದಿನಗಳೊಳಗೆ ಎಫ್ ಐಆರ್ ದಾಖಲಿಸಲಿದ್ದಾರೆ ಎಂದು ವಕೀಲರ ಸಂಘದ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ ತಿಳಿಸಿದ ಮೇರೆಗೆ ಕಲಾಪದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q